ಬಾಗಲಕೋಟೆ: ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎರಡು ತಿಂಗಳಿನಲ್ಲಿಯೇ ಗಬ್ಬೆದ್ದು ನಾರುತ್ತಿದೆ. ಭ್ರಷ್ಟಾಚಾರದ ಕಮಟು ವಾಸನೆ ಹೊಡೆಯುತ್ತಿದೆ ಎಂದು ಪ್ರಶ್ನಿಸುತ್ತಿಲ್ಲ ಎಂದು ಟೀಕಿಸಿದರು.
ಅಭಿವೃದ್ಧಿ ಕಾಮಗಾರಿಗಳನ್ನು ನಿಲ್ಲಿಸಬೇಡಿ. ನಡೆಯುತ್ತಿರುವ ಕಾಮಗಾರಿಗಳನ್ನು ಬಂದ್ ಮಾಡಿ ಕಮಿಷನ್ ಕೇಳಬೇಡಿ. ಬಿಜೆಪಿ ವಿರುದ್ಧ ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿದವರು, ಅಧಿಕಾರ ಸಿಕ್ಕ ಮೇಲೆ ಏನು ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.
ಶೇ6ರಷ್ಟು ವರ್ಗಾವಣೆ ಮಾಡುವ ನಿಯಮಗಳ ಆದೇಶ ಹೊರಡಿಸಿ, ಶೇ54ರಷ್ಟು ವರ್ಗಾವಣೆ ಮಾಡಲಾಗಿದೆ. ಅದೊಂದು ದಂಧೆಯಾಗಿದೆ. ತಮ್ಮ ಸರ್ಕಾರದ ಆದೇಶವನ್ನು ತಾವೇ ಪಾಲಿಸುವುದಿಲ್ಲ ಎಂದರೆ ಹೇಗೆ? ಹಣಕ್ಕಾಗಿ ಬೇಕಾಬಿಟ್ಟಿ ವರ್ಗಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಸರ್ಕಾರ ಕೆಡವಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸುತ್ತಾರೆ. ಅವರ ಶಾಸಕರ ಮೇಲೆ ಅವರಿಗೆ ನಂಬಿಕೆ ಇಲ್ಲವೇ? 30 ಮಂದಿ ಶಾಸಕರು ಈಗಾಗಲೇ ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದು ಸರ್ಕಾರ ಹಾದಿ ತಪ್ಪುತ್ತಿರುವುದನ್ನು ಗಮನಕ್ಕೆ ತಂದಿದ್ದಾರೆ. ಅವರ ವಿಶ್ವಾಸ ಗಳಿಸಲಿಕ್ಕೆ ಆಗಿಲ್ಲ. ಸರ್ಕಾರ ನಡೆಸಲಿಕ್ಕೆ ಕಾಂಗ್ರೆಸ್‌ಗೆ ಯೋಗ್ಯತೆ ಇಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ನಿಲ್ಲಿಸಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಬೇಕು. ಮಳೆಯಿಂದ ಹಾಳಾಗಿರುವ ಬೆಳೆ, ಬಿದ್ದಿರುವ ಮನೆಗಳಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ಪ್ರವಾಹದಿಂದ ಕಬ್ಬು ಬೆಳೆ ಹಾಳಾಗಿದ್ದು, ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಬೇಕು. ಬಿತ್ತನೆಯ ಬೆಳೆ ಹಾಳಾದ ರೈತರಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದರು.
ಎಸ್‌ಸಿ, ಎಸ್‌ಟಿ ಸಮುದಾಯದ ಅಭಿವೃದ್ಧಿ ಶಿಕ್ಷಣ, ಆರೋಗ್ಯ ಸೌಲಭ್ಯ ಒದಗಿಸಿಕೊಡಬೇಕು. ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕು ಎಂದು ಆಗ್ರಹಿಸಿದರು.
ಖಂಡನೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿಟ್ಟಿರುವ ₹11144 ಕೋಟಿ ಅನ್ನು ಗ್ಯಾರಂಟಿ ಯೋಜನೆಗಳಿಗೆ ಒದಗಿಸಿರುವುದನ್ನು ಖಂಡಿಸುತ್ತೇನೆ. ಗ್ಯಾರಂಟಿ ಯೋಜನೆಗಳು ಎಸ್‌ಸಿ ಎಸ್‌ಟಿ ಗಳ ಅಭಿವೃದ್ಧಿಗೆ ಸಿದ್ಧಪಡಿಸಿರುವ ವಿಶೇಷ ಯೋಜನೆಗಳಲ್ಲ. ಅವುಗಳಿಗೆ ಈ ಹಣ ಬಳಸಬಾರದು ಎಂದು ಕಾರಜೋಳ ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.