ಬಾಗಲಕೋಟೆ: ‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಡುವೆ ಮೊದಲಿನಿಂದ ಹೊಂದಾಣಿಕೆ ಇದೆ. ಸರ್ಕಾರ ರಚನೆಗೆ ಬೆಂಬಲ ಕೋರಿಯೇ ಇತ್ತೀಚೆಗೆ ಅಮಿತ್ ಶಾ ಅವರನ್ನು ವಿಜಯೇಂದ್ರ ಭೇಟಿಯಾಗಿದ್ದರು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.

‘ಆದರೆ, ಬಿಜೆಪಿಯ ಬಹುತೇಕ ಶಾಸಕರು ಇದಕ್ಕೆ ಒಪ್ಪಲ್ಲ. ಇಂತಹದ್ದನ್ನು ಒಪ್ಪುವುದಿಲ್ಲ ಎಂದೇ ನನ್ನನ್ನು ಹೊರ ಹಾಕಲಾಗಿದೆ’ ಎಂದು ಅವರು ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.

‘ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಬಿಜೆಪಿ ಭಾಗಿಯಾಗಲ್ಲ ಎಂಬ ಸಂದೇಶ ಬಿಜೆಪಿ ಹೈಕಮಾಂಡ್ ನೀಡಿದೆ ಎಂಬುದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮಾತುಗಳಿಂದ ಸ್ಪಷ್ಟವಾಗುತ್ತದೆ. ಇದರದಲ್ಲಿ ಮಧ್ಯಪ್ರವೇಶಿಸಲು ಬಿಜೆಪಿ ಸಿದ್ಧವಿಲ್ಲ’ ಎಂದರು.

‘ಮುಖ್ಯಮಂತ್ರಿ ಯಾರನ್ನು ಮಾಡಬೇಕು ಎಂಬುದು ಕಾಂಗ್ರೆಸ್ನ ಆಂತರಿಕ ವಿಚಾರ. ಆದರೆ, ಕಾಂಗ್ರೆಸ್ನಲ್ಲಿ ಶಾಸಕರ ಖರೀದಿ ನಡೆಯುತ್ತಿದೆ. ಹಿಂದೆಯೂ ನಡೆದಿತ್ತು’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.