ಶನಿವಾರ, ಮಾರ್ಚ್ 25, 2023
29 °C

ಸದ್ಯ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಇಲ್ಲ: ಸಚಿವ ಕತ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯ ಆದಾಗ ಪ್ರತ್ಯೇಕ ರಾಜ್ಯದ ಬೇಡಿಕೆ ಕೂಗು ಇರಲಿದೆ. ಈಗ ಒಬ್ಬ ಜವಾಬ್ದಾರಿಯುತ ಮಂತ್ರಿಯಾಗಿದ್ದೇನೆ. ಹೀಗಾಗಿ ಆ ವಿಚಾರ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,ಕೊರೊನಾದಿಂದ ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಹೀಗಾಗಿ ಉತ್ತರ ಕರ್ನಾಟಕ ಮಾತ್ರವಲ್ಲ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆ ಆಗಿದೆ. ಹೀಗಾಗಿ ಪ್ರತ್ಯೇಕ ರಾಜ್ಯದ ಕೂಗು ಸದ್ಯಕ್ಕೆ ಬೇಕಾಗಿಲ್ಲ. ಮುಂದೆ ಮೂರ್ನಾಲ್ಕು ವರ್ಷದ ನಂತರ ನೋಡೋಣ ಎಂದರು.

ಸದ್ಯ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವ   ಬಗ್ಗೆ ಈ ಭಾಗದ ಎಲ್ಲರೂ ತಲೆ‌ ಕೆಡಿಸಿಕೊಂಡಿದ್ದೀವಿ.
ಯೋಜನೆ ಈ ಅವಧಿಯಲ್ಲಿಯೇ ಆಗಲೇಬೆಕೆಂಬ ಹಠ ಇದೆ.

ಕೃಷ್ಣೆಯಿಂದ ಬರೀ ಬಾಗಲಕೋಟೆ, ವಿಜಯಪುರ ಮಾತ್ರವಲ್ಲ ಹೈದರಾಬಾದ್ ಕರ್ನಾಟಕದ ಎಲ್ಲ ಜಿಲ್ಲೆಗಳೂ ಸಮಗ್ರ ನೀರಾವರಿಗೆ ಒಳಪಡಬೇಕು ಎಂಬ ಆಶಯ ಇದೆ. ಅದಕ್ಕೆ ತೊಂದರೆ‌‌ ಆದಾಗ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಇರುತ್ತದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು