ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ: ಹರ್ ಘರ್ ತಿರಂಗಾ ಅಭಿಯಾನ

Published : 14 ಆಗಸ್ಟ್ 2024, 15:59 IST
Last Updated : 14 ಆಗಸ್ಟ್ 2024, 15:59 IST
ಫಾಲೋ ಮಾಡಿ
Comments

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಐದು ವರ್ಷಗಳಲ್ಲಿ ಸಮಗ್ರ ಅಭಿವೃದ್ಧಿಯೊಂದಿಗೆ ಭಾರತವನ್ನು ವಿಶ್ವಗುರುವಾಗಿಸುವಲ್ಲಿ ಸಂದೇಹವಿಲ್ಲ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ಹೇಳಿದರು.

ಬಿಜೆಪಿಯಿಂದ ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದಲ್ಲಿ ಸ್ವಾತಂತ್ರ್ಯ ಉತ್ಸವ ಹಾಗೂ ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಹಮ್ಮಿಕೊಂಡಿದ್ದ ತಿರಂಗಾಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.

ಕಳೆದ 10 ವರ್ಷಗಳಲ್ಲಿ ಭಾರತ ಸಾಕಷ್ಟು ಅಭಿವೃದ್ಧಿ ಹೊಂದಿದ ರಾಷ್ಟವಾಗಿದೆ. ಪ್ರಧಾನಿ ಮೋದಿಯವರ ಪರಿಶ್ರಮದ ಫಲವಾಗಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕ, ಔದ್ಯೋಗಿಕ, ತಂತ್ರಜ್ಞಾನಗಳ ಆವಿಷ್ಕಾರದೊಂದಿಗೆ ಆಧುನಿಕ ಭಾರತ ನಿರ್ಮಾಣಗೊಳ್ಳಲಿದೆ ಎಂದರು.

ಶಿವಾನಂದ ಜಿನ್‌ನಿಂದ ಆರಂಭವಾದ ತಿರಂಗಾಯಾತ್ರೆಯ ಮೆರವಣಿಗೆ ವಲ್ಲಭಭಾಯಿ ಚೌಕ್, ಬಸವೇಶ್ವರ ಬ್ಯಾಂಕ್, ಟೀಕಿನಮಠ, ಬೀಳೂರ ಅಜ್ಜನ ದೇವಸ್ಥಾನ, ಮೂಲಕ ಬಸವೇಶ್ವರ ವೃತ್ತದ ಬಳಿ ಸಮಾರೋಪಗೊಂಡಿತು

ಸೇನಾ ನಿವೃತ್ತ ಕ್ಯಾಪ್ಟನ್ ಅರ್ಜುನ ಕೋರಿ, ಎಂ.ಎಸ್.ದಡ್ಡೆನ್ನವರ, ಬಸವರಾಜ ಯಂಕಂಚಿ, ಬಸವರಾಜ ಹುನಗುಂದ, ಉಮೇಶ ಹಂಚಿನಾಳ, ಶ್ರೀಧರ ನಾಗರಬಟ್ಟ, ಲಕ್ಷ್ಮೀನಾರಾಯಣ ಕಾಸಟ್, ಸತ್ಯನಾರಾಯಣ ಹೇಮಾದ್ರಿ, ಜ್ಯೋತಿ ಭಜಂತ್ರಿ, ಬಸವರಾಜ ಅವರಾದಿ, ರಾಜು ಶಿಂತ್ರೆ, ಪರಮೇಶ್ವರ, ಸಂಗಪ್ಪ ಸಜ್ಜನ, ಸುಜಾತ ಶಿಂಧೆ, ಶಶಿಕಲಾ ಮಜ್ಜಗಿ, ರೇಖಾ ಕಲಬುರ್ಗಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT