ಶನಿವಾರ, ಸೆಪ್ಟೆಂಬರ್ 25, 2021
27 °C

Tokyo Olympics: ಗಾಲ್ಫ್‌ನಲ್ಲಿ ಅದಿತಿ ಫೈನಲ್ ಪ್ರವೇಶ, ಬಾಗಲಕೋಟೆ ಜನರಲ್ಲಿ ಸಂತಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಇಲ್ಲಿನ ಜಮಖಂಡಿ ಮೂಲದ ಗಾಲ್ಫರ್ ಅದಿತಿ ಅಶೋಕ್ ಟೋಕಿಯೋ ಒಲಿಂಪಿಕ್ಸ್‌ನ ಗಾಲ್ಫ್ ಆಟದಲ್ಲಿ ಫೈನಲ್ ಪ್ರವೇಶಿಸಿರುವುದು ಜಿಲ್ಲೆಯ ಜನರಲ್ಲಿ ಹೆಮ್ಮೆಯ ಭಾವ ಮೂಡಿಸಿದೆ.  

ಅದಿತಿ ತಂದೆ ಅಶೋಕ ಗುಡ್ಲಮನಿ ಜಮಖಂಡಿಯವರು. ಈಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಟೋಕಿಯೋ ಒಲಿಂಪಿಕ್ಸ್‌ನ ಗಾಲ್ಫ್ ಸ್ಪರ್ಧೆಯಲ್ಲಿ ಅದಿತಿ ಫೈನಲ್ ತಲುಪಿದ್ದಾರೆ. ಅಶೋಕ್ ಅವರ ಸಹೋದರರಾದ ಅರುಣ್ ಹಾಗೂ ಬಸವರಾಜ ಜಮಖಂಡಿಯಲ್ಲಿಯೇ ನೆಲೆಸಿದ್ದಾರೆ. ಅವರ ಕುಟುಂಬ ವರ್ಗದವರು ಹಾಗೂ ಜಿಲ್ಲೆಯ ಕ್ರೀಡಾ ಅಭಿಮಾನಿಗಳು ಅದಿತಿ ಪದಕ ಗೆಲ್ಲಲಿ ಎಂದು ಹಾರೈಸುತ್ತಿದ್ದಾರೆ.

ಇದನ್ನೂ ಓದಿ...Tokyo Olympics | ಭಾರತ ಮಹಿಳಾ ಹಾಕಿ ತಂಡಕ್ಕೆ ಮತ್ತೊಂದು ಆಘಾತ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು