ಉಗಲವಾಟ: ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳ ಸಾವು

ಬಾಗಲಕೋಟೆ: ಬಾದಾಮಿ ತಾಲ್ಲೂಕಿನ ಉಗಲವಾಟ ಗ್ರಾಮದಲ್ಲಿ ಭಾನುವಾರ ಕೆರೆಯಲ್ಲಿ ಮುಳುಗಿ ಇಬ್ಬರು ಪುಟ್ಟ ಮಕ್ಕಳು ಸಾವಿಗೀಡಾಗಿದ್ದಾರೆ.
ರಾಮದುರ್ಗ ತಾಲ್ಲೂಕಿನ ಸಂಗಳ ಗ್ರಾಮದ ಮಯಾಕ್ ಕೆರೂರ (7) ಹಾಗೂ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಗ್ರಾಮದ ಅಯಾನ್ ಮುಲ್ಲಾ (6) ಸಾವಿಗೀಡಾದವರು.
ಕೊರೊನಾ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇರುವ ಕಾರಣ ಉಗಲವಾಟದಲ್ಲಿನ ಸೋದರ ಮಾವ ಬಾಬುಸಾಬ್ ವಾಲಿಕಾರ ಅವರ ಮನೆಗೆ ಮಕ್ಕಳು ಬಂದಿದ್ದರು. ಆಟವಾಡಲು ಬೆಳಿಗ್ಗೆ ಮನೆಯಿಂದ ಹೊರಗೆ ಹೋಗಿದ್ದರು. ಸಮೀಪದ ಕೆರೆಯಲ್ಲಿ ಅವರ ಶವಗಳು ಪತ್ತೆಯಾಗಿವೆ. ಕೆರೂರು ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಶವ ಪರೀಕ್ಷೆ ನಡೆಸಿ ಪೊಲೀಸರಿಗೆ ಒಪ್ಪಿಸಲಾಯಿತು.
ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.