ಶನಿವಾರ, ಆಗಸ್ಟ್ 13, 2022
26 °C

ಬಾಗಲಕೋಟೆ: ಕಾಲುವೆಗೆ ಟ್ರ್ಯಾಕ್ಟರ್ ಉರುಳಿ ಇಬ್ಬರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬಾಗಲಕೋಟೆ: ಮುಧೋಳ ತಾಲ್ಲೂಕಿನ ಕುಳಲಿ ಬಳಿ ಕಾಲುವೆಗೆ ಟ್ರ್ಯಾಕ್ಟರ್ ಉರುಳಿ ಬಿದ್ದು ಇಬ್ಬರು ನೀರು ಪಾಲಾಗಿದ್ದಾರೆ.

ಗ್ರಾಮದ ಸಮೀಪದ ಘಟಪ್ರಭಾ ಎಡದಂಡೆ ಕಾಲುವೆಗೆ ತಡರಾತ್ರಿ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ.

ಭಾನುವಾರ ರಾತ್ರಿ ಕೆಲಸಕ್ಕೆಂದು ಹೊಲಕ್ಕೆ ಹೋಗಿ ವಾಪಸ್ ಬರುವಾಗ ಕತ್ತಲಲ್ಲಿ ದಿಢೀರನೆ ಆಕಳು ಎದುರಿಗೆ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಅವಘಡ ನಡೆದಿದೆ ಎಂದು ತಿಳಿದುಬಂದಿದೆ. ಈ ವೇಳೆ ಆಕಳು ಕೂಡ ನೀರುಪಾಲಾಗಿದೆ.

ಗ್ರಾಮದ ಶಿವರುದ್ರಪ್ಪ ಪೋಳ್ (55) ಪೈಗಂಬರ್ ಲಾಡಖಾನ್ (25) ಸಾವಿಗೀಡಾದವರು.

ಟ್ರ್ಯಾಕ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಶಂಕ್ರಪ್ಪ ಗೌಡರ ಈಜಿ ಹೊರಗೆ ಬಂದು ಬದುಕುಳಿದಿದ್ದಾರೆ.

ಸ್ಥಳಕ್ಕೆ ಮಹಾಲಿಂಗಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು