ಗುರುವಾರ , ಅಕ್ಟೋಬರ್ 22, 2020
23 °C

ಮದುವೆಗೆ ನಿರಾಕರಣೆ: ಪ್ರೇಮಿಗಳಿಬ್ಬರು ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಧೋಳ: ಬೇರೆ ಬೇರೆ ಜಾತಿಯ ಕಾರಣ ಮನೆಯವರು ಮದುವೆಗೆ ಒಪ್ಪುವುದಿಲ್ಲ ಎಂದು ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಶನಿವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲ್ಲೂಕಿನ ಬರಗಿ ಗ್ರಾಮದ ಆನಂದ ರಾಮಪ್ಪ ಬನಹಟ್ಟಿ (23) ಹಾಗೂ 15 ವರ್ಷದ ಬಾಲಕಿ ಮೃತಪಟ್ಟವರು.

ಕೂಲಿ ಕೆಲಸ ಮಾಡುವ ರಾಮಪ್ಪ ಹಾಗೂ ಶಾಲೆ ಕಲಿಯುತ್ತಿದ್ದ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ತಮ್ಮದು ಜಾತಿ ಬೇರೆಯಾದ ಕಾರಣ ಮದುವೆಗೆ ಮನೆಯವರು ಒಪ್ಪುವುದಿಲ್ಲ ಎಂದು ಭಾವಿಸಿ ಇಲ್ಲಿನ ಬಸವ ನಗರದಲ್ಲಿನ ಆನಂದ ಅವರ ನಿವಾಸದಲ್ಲಿ ಸಂಜೆ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮುಧೋಳ ನಗರ ಠಾಣೆಯಲ್ಲಿ ಬಾಲಕಿಯ ತಾಯಿ ದೂರು ದಾಖಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.