ಬಾಗಲಕೋಟೆ: ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಎಚ್.ವೈ. ಮೇಟಿ ಅವರ ಕಿರಿಯ ಪುತ್ರ ಉಮೇಶ ಮೇಟಿಗೆ ಟಿಕೆಟ್ ಘೋಷಣೆ ಮಾಡಿದೆ.

ಮೇಟಿ ಅವರ ಹಿರಿಯ ಪುತ್ರ ಮಲ್ಲಿಕಾರ್ಜುನ ಮೇಟಿ, ಪುತ್ರಿ ಮಹಾದೇವಿ ಮೇಟಿ ಅವರೂ ಆಕಾಂಕ್ಷಿಗಳಾಗಿದ್ದರು. ಉಮೇಶ ಮೇಟಿ ಅವರಿಗೆ ಟಿಕೆಟ್ ನೀಡಿದೆ.

ಉಮೇಶ ಹುಲ್ಲಪ್ಪ ಮೇಟಿ ಪಿಯುಸಿ ಓದಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ತಿಮ್ಮಾಪುರದಲ್ಲಿ ಜನಿಸಿದ್ದಾರೆ.

ಉಮೇಶ ಮೇಟಿ ಅವರು ರಾಂಪುರದ ರೇವಣಸಿದ್ದೇಶ್ವರ ಕೋ. ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿದ್ದಾರೆ.

ಮೇಟಿ ಅವರ ಚುನಾವಣೆಗಳಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದರು. ಈಗ ಅವರೇ ಅಭ್ಯರ್ಥಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.