ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾಲಿಂಗಪುರ | ಅರ್ಬನ್ ಬ್ಯಾಂಕ್‌ ಚುನಾವಣೆ: 46 ನಾಮಪತ್ರ ಸಲ್ಲಿಕೆ

Published : 22 ಡಿಸೆಂಬರ್ 2023, 14:57 IST
Last Updated : 22 ಡಿಸೆಂಬರ್ 2023, 14:57 IST
ಫಾಲೋ ಮಾಡಿ
Comments

ಮಹಾಲಿಂಗಪುರ: ಪಟ್ಟಣದ ದಿ ಮಹಾಲಿಂಗಪೂರ ಅರ್ಬನ್ ಕೋ-ಆಪ್ ಬ್ಯಾಂಕ್‌ನ ಆಡಳಿತ ಮಂಡಳಿ ಸದಸ್ಯರ ಚುನಾವಣೆಗೆ ನಾಮಪತ್ರ ಸಲ್ಲಿಸಲು ಶುಕ್ರವಾರ ಕೊನೆಯ ದಿನವಾಗಿತ್ತು. ಕೊನೆಯ ದಿನದ 27 ನಾಮಪತ್ರ ಸೇರಿದಂತೆ ಒಟ್ಟು 46 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಎಸ್.ಕೆ.ಸಾರವಾಡ ತಿಳಿಸಿದ್ದಾರೆ.

ವಿವಿಧ 6 ಕ್ಷೇತ್ರಗಳ 13 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಡಿ.23 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಡಿ.24 ರಂದು ನಾಮಪತ್ರ ಹಿಂಪಡೆಯುವ ಅಂತಿಮ ದಿನವಾಗಿದೆ. ಡಿ.30 ರಂದು ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 4 ಗಂಟೆವರೆಗೆ ಮತದಾನ ನಡೆಯಲಿದೆ. ಅಂದೇ ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT