ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Published 28 ಜೂನ್ 2024, 15:51 IST
Last Updated 28 ಜೂನ್ 2024, 15:51 IST
ಅಕ್ಷರ ಗಾತ್ರ

ಬಾಗಲಕೋಟೆ: ವಾಲ್ಮೀಕಿ ಸಮಾಜದ ಅಭಿವೃದ್ಧಿಗೆ ಮೀಸಲಿಟ್ಟಿದ್ದ ₹187 ಕೋಟಿ ದುರ್ಬಳಕೆ ಮಾಡಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಶುಕ್ರವಾರ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದೊಳಕ್ಕೆ ಹೋಗುವುದನ್ನು ಬ್ಯಾರಿಕೇಡ್‌ ಹಾಕಿ ಮುಖ್ಯದ್ವಾರದಲ್ಲಿಯೇ ಪೊಲೀಸರು ತಡೆದರು. ಇದರಿಂದ ಸಿಟ್ಟಿಗೆದ್ದ ಮುಖಂಡರು, ಬ್ಯಾರಿಕೇಡ್‌ ದೂಡಿ ಒಳಹೋಗಲು ಯತ್ನಿಸಿದರು. ಆಗ ಪೊಲೀಸರು ಹಾಗೂ ಮುಖಂಡರ ನಡುವೆ ತಳ್ಳಾಟ ನಡೆಯಿತು.

ವಾಲ್ಮೀಕಿ ನಿಗಮದಲ್ಲಿ ಬಡ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣವನ್ನು ದುರುಪಯೋಗ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಚಿವರೊಬ್ಬರು ರಾಜೀನಾಮೆ ನೀಡಿದ್ದಾರೆ. ಆದರೂ, ಸಾಕ್ಷಿಗಳಿಗೆ ಬೆದರಿಕೆ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಬಡ ಜನರ ಹಣವನ್ನು ದುರುಪಯೋಗ ಪಡಿಸಿಕೊಂಡಿರುವ ಮುಖ್ಯಮಂತ್ರಿ ಅವರಿಗೆ ಅಧಿಕಾರದಲ್ಲಿರಲು ಯಾವುದೇ ನೈತಿಕ ಅಧಿಕಾರವಿಲ್ಲ. ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ಮಾಜಿ ಶಾಸಕ ವೀರಣ್ಣ ಚರಂತಿಮಠ, ಬೆಳಗಾವಿ ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನಕಾರ್ಯದರ್ಶಿಗಳಾದ ಮಲ್ಲಯ್ಯ ಮುಗನೂರಮಠ, ರಾಜು ನಾಯ್ಕರ, ಮುಖಂಡರಾದ ಸತ್ಯನಾರಾಯಣ ಹೇಮಾದ್ರಿ, ಶಿವಾನಂದ ಸುರಪುರ, ಜಿ.ಎನ್‌. ಪಾಟೀಲ, ಯಲ್ಲಪ್ಪ ಕಲಾದಗಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT