ಶುಕ್ರವಾರ, ಜುಲೈ 30, 2021
20 °C

ಬಾಗಲಕೋಟೆ: ಜಂಬಗಿ ಸೇತುವೆಗೆ ವೀರ ಸಾವರ್ಕರ್ ಹೆಸರು ನಾಮಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಜಂಬಗಿ ಗ್ರಾಮದ ಬಳಿ ಕೃಷ್ಣಾ ನದಿಗೆ ಕಟ್ಟಲಾಗಿರುವ ಸೇತುವೆಗೆ ಭಾನುವಾರ ವೀರ ಸಾವರ್ಕರ್ ಸೇತುವೆ ಎಂದು ಹೆಸರಿಡಲಾಯಿತು.

ಜಮಖಂಡಿಯ ಸಾವರ್ಕರ್ ಪ್ರತಿಷ್ಠಾನದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇತುವೆಗೆ ವೀರ ಸಾವರ್ಕರ್ ಸೇತುವೆ ಎಂದು ಹೆಸರು ಇಡಲಾಯಿತು.

ಈ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಜಿ.ಎಸ್‌. ನ್ಯಾಮಗೌಡ ಹಾಗೂ ಜಮಖಂಡಿಯ ವೀರ ಸಾವರ್ಕರ್ ಪ್ರತಿಷ್ಠಾನದ ಅಧ್ಯಕ್ಷ ಶೈಲೇಶ್ ಆಪ್ಟೆ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಇದ್ದರು.

ಜಂಬಗಿ ಸೇತುವೆಗೆ ವೀರ ಸಾವಕ೯ರ್ ಹೆಸರನ್ನು ಅಧಿಕೃತವಾಗಿ  ಘೋಷಿಸುವಂತೆ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಮುಖಂಡರು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು