ಹುನಗುಂದ: ಚಿತ್ತರಗಿಯ ವಿಜಯಮಹಾಂತೇಶ್ವರ ಸಂಸ್ಥಾನಮಠದಲ್ಲಿ ನೂತನವಾಗಿ ನಿರ್ಮಿಸಿದ ವಿಜಯಮಹಾಂತೇಶ್ವರ ಶಿಲಾ ಮಂಟಪದ ಉದ್ಘಾಟನೆ ಹಾಗೂ ಶ್ರಾವಣ ಮಾಸದ ಪ್ರವಚನ ಮಂಗಲ ಕಾರ್ಯಕ್ರಮ ಆ. 22ರಂದು ಸಂಜೆ 4ಕ್ಕೆ ಪಟ್ಟಣದ ಬಸವ ಮಂಟಪದಲ್ಲಿ ಜರುಗಲಿದೆ.

ಗದಗ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಕೊಪ್ಪಳ ಗವಿಸಿದ್ಧೇಶ್ವರ ಮಠದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಶಿಲಾ ಮಂಟಪ ಉದ್ಘಾಟಿಸುವರು. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಚಿತ್ತರಗಿ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ಗುಳೇದಗುಡ್ಡದ ಗುರುಸಿದ್ದೇಶ್ವರ ಸ್ವಾಮೀಜಿ, ಬಸವ ಕಲ್ಯಾಣದ ಸಿದ್ಧರಾಮ ಶರಣರು, ಶಿರೂರಿನ ಬಸವಲಿಂಗ ಸ್ವಾಮೀಜಿ, ಸಂತೆಕಡೂರಿನ ನವಲಿಂಗ ಶರಣರು, ಲಿಂಗಸೂರಿನ ಸಿದ್ಧಲಿಂಗ ಸ್ವಾಮೀಜಿ, ಮನಗೂಳಿಯ ವಿರತಿಶಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು.

ಪ್ರವಚನಕಾರರಾದ ಶರಣಬಸವ ಅಪ್ಪಗಳು ಚಿತ್ತರಗಿ ಶ್ರೀ ವಿಜಯ ಮಹಾಂತ ಶಿವಯೋಗಿಗಳ ಕುರಿತು ಅನುಭಾವ ನಿವೇದನೆ ಮಾಡುವರು. ಶಾಸಕ ವಿಜಯಾನಂದ ಕಾಶಪ್ಪನವರ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ವೀರಣ್ಣ ಚರಂತಿಮಠ, ಎಸ್ಆರ್ಎನ್ಇ. ಫೌಂಡೇಶನ್ ಅಧ್ಯಕ್ಷ ಎಸ್.ಆರ್. ನವಲಿಹಿರೇಮಠ, ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಡಾ. ಮಹಾಂತೇಶ ಕಡಪಟ್ಟಿ, ಬಸವ ಕೇಂದ್ರದ ಅಧ್ಯಕ್ಷ ಶಿವಪ್ಪ ನಾಗೂರ ಪಾಲ್ಗೊಳ್ಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.