ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯದಲ್ಲಿ ಏರುಪೇರು: ವಿಜಯಪುರ ಸಂಸದ ರಮೇಶ ಜಿಗಜಿಣಗಿ ಆಸ್ಪತ್ರೆಗೆ ದಾಖಲು

Published 28 ಜನವರಿ 2024, 12:21 IST
Last Updated 28 ಜನವರಿ 2024, 12:21 IST
ಅಕ್ಷರ ಗಾತ್ರ

ಬಾಗಲಕೋಟೆ: ಎದೆನೋವು ಕಾಣಿಸಿಕೊಂಡಿದ್ದ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಇಲ್ಲಿನ ಹಾನಗಲ್ ಕುಮಾರೇಶ್ಚರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಜಯಪುರದಿಂದ ಬೆಳಗಾವಿಗೆ ಹೋಗುವಾಗ ಬೀಳಗಿ ಬಳಿ ಇದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಬಾಗಲಕೋಟೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಪಾಯದಿಂದ ಪಾರಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿದ್ದು, ಹೆಚ್ಚಿನ ತಪಾಸಣೆ ಮುಂದುವರಿದಿದೆ.

ಮಾಜಿ ಶಾಸಕ ವೀರಣ್ಣ ಚರಂತಿಮಠ ಆಸ್ಪತ್ರಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಕೆಲ ದಿನಗಳ ಹಿಂದೆಯೂ ಆರೋಗ್ಯದಲ್ಲಿ ತೊಂದರೆಯಾಗಿ ಚಿಕಿತ್ಸೆ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT