ಹುನಗುಂದ: ತಾಲ್ಲೂಕಿನ ಚಿತ್ತವಾಡಗಿ ಗ್ರಾಮದಲ್ಲಿ ಶನಿವಾರ ಟ್ರ್ಯಾಕ್ಟರ್ ಟ್ರೈಲರ್ಗೆ ತುಂಬಿದ್ದ ಜೋಳದ ಮೇವಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೇವು ಸಂಪೂರ್ಣ ಸುಟ್ಟ ಕರಕಲಾಗಿದೆ.

ತಾಲ್ಲೂಕಿನ ಚಿಕ್ಕಬಾದವಾಡಗಿ ಗ್ರಾಮದ ರೈತರೊಬ್ಬರು ಯಡಹಳ್ಳಿ ಗ್ರಾಮದಿಂದ ಜಾನುವಾರುಗಳಿಗೆ ಜೋಳದ ಮೇವು ತಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಸಾವಿರಾರೂ ರೂಪಾಯಿ ಕೊಟ್ಟು ರೈತರಿಂದ ಖರೀದಿ ಮಾಡಿದ್ದ ಮೇವು ಬೆಂಕಿಗೆ ಆಹುತಿಯಾಗಿರುವುದು ನೋವು ತೊಂದಿದೆ ಎಂದು ರೈತರು ಹೇಳಿದರು.

ಕೆಲವು ದಿನಗಳ ಹಿಂದೆ ಚಿತ್ತವಾಡಗಿ ಗ್ರಾಮದ ಮುಖ್ಯ ರಸ್ತೆಯನ್ನು ಜಿಲ್ಲಾ ಪಂಚಾಯಿತಿ ವತಿಯಿಂದ ಸಿಸಿ (ರಸ್ತೆ ) ಕಾಮಗಾರಿ ಕೈಗೊಳ್ಳಲಾಗಿದೆ. ಹೀಗಾಗಿ ಮುಖ್ಯ ರಸ್ತೆ ಎತ್ತರವಾದ ಪರಿಣಾಮ ವಾಹನದ ಮೇಲ್ಭಾಗದಲ್ಲಿ ವಿದ್ಯುತ್ ತಂತಿಗಳು ಹಾದುಹೋಗಿದ್ದು, ವಾಹನಗಳಿಗೆ ತಾಕುತ್ತಿವೆ. ಹೀಗಾಗಿ ಟ್ರ್ಯಾಕ್ಟರ್ ಗೆ ಬೆಂಕಿ ತಗುಲಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.

ಗ್ರಾಮದಲ್ಲಿ ಹತ್ತು ದಿನಗಳ ಹಿಂದೆ ಕಾಂಕ್ರಿಟ್ ತುಂಬಿಕೊಂಡು ಹೋಗುತ್ತಿದ್ದ ವಾಹನಕ್ಕೆ ವಿದ್ಯುತ್ ತಂತಿ ತಗುಲಿ ತಂತಿ ತುಂಡಾಗಿ ಬಿದ್ದಿತ್ತು. ಅದೃಷ್ಟವಶಾತ್ ಯಾರಿಗೂ ಅಪಾಯವಾಗಲಿಲ್ಲ. ಈ ರೀತಿ ಘಟನೆಗಳು ನಡೆಯುತ್ತಿದ್ದರೂ ಸಂಬಂಧಪಟ್ಟವರು ನಿರ್ಲಕ್ಷ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿ ಗುತ್ತಿಗೆ ಪಡೆದವರು ವಿದ್ಯುತ್ ಇಲಾಖೆ ಸಂಪರ್ಕಿಸಿ ಮುಖ್ಯ ರಸ್ತೆಯಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವುದರ ಬಗ್ಗೆ ಮಾಹಿತಿ ನೀಡಬೇಕು. ಆದರೆ ಗುತ್ತಿಗೆದಾರರು ನಮ್ಮ ಇಲಾಖೆಯನ್ನು ಸಂಪರ್ಕಿಸದೆ ಕಾಮಗಾರಿ ಕೈಗೊಂಡಿರುವುದು ಈ ರೀತಿ ಘಟನೆಗೆ ಕಾರಣವಾಗುತ್ತಿದೆ. ಎಂದು ಹೆಸ್ಕಾಂ ಉಪ ವಿಭಾಗದ ಶಾಖಾ ವ್ಯವಸ್ಥಾಪಕ ದತ್ತು ದಾಯಿಗುಡಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-19-1043649453

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.