ಕುಳಗೇರಿ ಕ್ರಾಸ್: ಕುಳಗೇರಿ ಹೋಬಳಿಯ ಹಾಗನೂರ ಮತ್ತು ಕಾಕನೂರ, ಚಿಮ್ಮನಕಟ್ಟಿ ಸೇರಿದಂತೆ ಹಲವೂ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಭಾರಿ ಗಾಳಿ, ಮಳೆಗೆ ಸುಮಾರು 100ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಧರೆಗುರುಳಿದ್ದು,ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಹಾಗನೂರ ಗ್ರಾಮಸ್ಥರಿಗೆ ನಾಲ್ಕೈದು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ, ಗ್ರಾಮಸ್ಥರು ಮೊಬೈಲ್ ಚಾರ್ಚ್ ಮಾಡಿಕೊಳ್ಳಲು ತಮ್ಮ ತಮ್ಮ ಸಂಬಂಧಿಕರ ಗ್ರಾಮಗಳಿಗೆ ತೆರಳುತ್ತಿದ್ದಾರೆ.

ಕಾಕನೂರ ಗ್ರಾಮದಲ್ಲಿಯೂ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಮೂರು ದಿನಗಳಿಂದ ವಿದ್ಯುತ್ ಸಮಸ್ಯೆ ಉಂಟಾಗಿ ಕುಡಿಯುವ ನೀರು ಪೂರೈಕೆಯಲ್ಲಿ ವಿಳಂಬವಾಗಿದ್ದರಿಂದ ಬಹುತೇಕ ಜನರು ಪಕ್ಕದ ನೀರಲಕಕೇರಿ ಗ್ರಾಮಕ್ಕೆ ತೆರಳಿ ಕುಡಿಯುವ ನೀರು ತರುತ್ತಿದ್ದಾರೆ.

ಕುಳಗೇರಿ ಹೋಬಳಿಯ ಸುತ್ತಮುತ್ತ ಉಂಟಾಗಿರುವ ಸಮಸ್ಯೆ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದ ಸಮಸ್ಯೆಯಿರುವ ಗ್ರಾಮಗಳಿಗೆ ಪರ್ಯಾಯ ವಿದ್ಯುತ್ ಸಂಪರ್ಕ ನೀಡಲಾಗುವುದು ಎಂದು ಹೆಸ್ಕಾಂ ಶಾಖಾಧಿಕಾರಿ ಬಾಲಚಂದ್ರ ಕೊಳ್ಳಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-19-164324406

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.