ಕೆರೂರ: ಇತ್ತಿಚಿಗೆ ಹೋಬಳಿಯ ನೀರಬೂದಿಹಾಳ, ಯಂಡಿಗೇರಿ, ಕರಡಿಗುಡ್ಡ ಎಸ್.ಎ ಗ್ರಾಮಗಳಲ್ಲಿ ಆಲಿಕಲ್ಲು ಮಳೆಯಿಂದ ಹಾನಿಯಾದ ರೈತರ ಜಮೀನುಗಳಿಗೆ ಶಾಸಕ ಜೆ.ಟಿ.ಪಾಟೀಲ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಹಾನಿಯಾದ ಜಮೀನುಗಳನ್ನು ವೀಕ್ಷಿಸಿದ ಶಾಸಕ, ‘ಹಾನಿಯಾದ ಜಮೀನುಗಳ ಸರ್ವೆ ಕಾರ್ಯವನ್ನು ಶೀಘವೇ ಪ್ರಾರಂಭಿಸಬೇಕು’ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

‘ಸರ್ವೆ ಕಾರ್ಯ ಮುಗಿದ ಬಳಿಕ ಸರ್ಕಾರದಿಂದ ಪರಿಹಾರ ಒದಗಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ತಿಳಿಸಿದರು.

ಅಕಾಲಿಕ ಆಲಿಕಲ್ಲು ಮಳೆಗೆ ಹೊಲದ ದಡ್ಡಿಯಲ್ಲಿದ್ದ ಆಡು ಮತ್ತು ಕುರಿಗಳು ಮೃತಪಟ್ಟಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದರು. ‘ಮೃತಪಟ್ಟ ಕುರಿಗಳ ವರದಿಯನ್ನು ಅಧಿಕಾರಿಗಳಿಂದ ಪಡೆದುಕೊಂಡು ಪರಿಹಾರಕ್ಕೆ ಸೂಕ್ತ ಕ್ರಮಕೈಗೊಳ್ಳಲಾಗುವುದು’ ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.

ಗಿರೀಶ ನಾಡಗೌಡರ, ಪ್ರವೀಣ ಚಿಕ್ಕೂರ, ಅಶೋಕ ಕೊಪ್ಪದ, ವೆಂಕಟೇಶ ಜಂಬಗಿ, ಉಪ ತಹಶೀಲ್ದಾರ್ ವಿರೇಶ ಬಡಿಗೇರ, ಕೆರೂರ ವೃತ್ತ ನಿರೀಕ್ಷಕ ಆನಂದ ಭಾವಿಮಠ, ಸಹಾಯಕ ಕೃಷಿ ಅಧಿಕಾರಿ ಪರಶುರಾಮ ಗಣಿ, ಗ್ರಾಮ ಆಡಳಿತ ಅಧಿಕಾರಿ ಸಿ.ಎಫ್.ನಧಾಫ್ ಹಾಗೂ ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-19-1746753405

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.