ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಗ್ರಾಮೀಣ ಅಂಚೆ ನೌಕರರ ಪ್ರತಿಭಟನೆ

Published 13 ಡಿಸೆಂಬರ್ 2023, 15:34 IST
Last Updated 13 ಡಿಸೆಂಬರ್ 2023, 15:34 IST
ಅಕ್ಷರ ಗಾತ್ರ

ಬಾಗಲಕೋಟೆ: ಕಮಲೇಶಚಂದ್ರ ಸಮಿತಿ ವರದಿಯನ್ನು ಸಂಪೂರ್ಣ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಹಾಗೂ ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘದ ಸದಸ್ಯರು ಪ್ರತಿಭಟನೆ ಮಾಡಿದರು.

ಗ್ರಾಮೀಣ ಪ್ರದೇಶದ ಜನರಿಗೆ ಸೇವೆ ಒದಗಿಸುವ ಕಾರ್ಯವನ್ನು ಅಂಚೆ ನೌಕರರು ಮಾಡುತ್ತಿದ್ದಾರೆ. ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.

8 ಗಂಟೆಗಳ ಕಾಲ ಕೆಲಸ ನೀಡಬೇಕು. ಪಿಂಚಣಿ ಸೇರಿದಂತೆ ಎಲ್ಲ ಸೌಲಭ್ಯ ಕಲ್ಪಿಸಬೇಕು. ಸೇವಾ ಹಿರಿತನ ಆಧಾರದ ಮೇಲೆ ಜಿಡಿಎಸ್‌ ನೌಕರರಿಗೆ ವಿಶೇಷ ಇನ್‌ಕ್ರಿಮೆಂಟ್‌ ನೀಡಬೇಕು ಎಂದು ಒತ್ತಾಯಿಸಿದರು.

ಗ್ರಾಚ್ಯುಟಿ ಮೇಲಿನ ಗರಿಷ್ಠ ಮೊತ್ತದ ಮಿತಿಯನ್ನು ₹1.5 ಲಕ್ಷದಿಂದ ₹5 ಲಕ್ಷಕ್ಕೆ ಹೆಚ್ಚಿಸಬೇಕು. ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. 30 ದಿನ ವೇತನ ಸಹಿತ ರಜೆ ನೀಡಬೇಕು. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 180 ದಿನಗಳವರೆಗೆ ರಜೆ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು. ಗುಂಪು ವಿಮೆ ಕವರೇಜ್‌ ಮೊತ್ತವನ್ನು ₹5 ಲಕ್ಷಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಕಾರ್ಯದರ್ಶಿ ಅಶೋಕ ಮನಗೂಳಿ, ಎಚ್‌.ಬಿ. ಪತಗೌಡ್ರ, ಎಂ.ಆರ್‌. ನಂದವಾಡಗಿ ಮತ್ತಿತರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT