ಸೋಮವಾರ, ಮೇ 23, 2022
24 °C

ವಿನಯ ಕುಲಕರ್ಣಿ ಬಂಧನ; ಬಿಜೆಪಿಯ ರಾಜಕೀಯ ಷಡ್ಯಂತ್ರ: ಸಿದ್ದರಾಮಯ್ಯ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Siddaramaiah

ಬಾಗಲಕೋಟೆ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ಬಿಜೆಪಿಯ ರಾಜಕೀಯ ಷಡ್ಯಂತ್ರದ ಕ್ರಮ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪುನರುಚ್ಚರಿಸಿದರು.

ಬಾದಾಮಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮುಗಿದು, ಚಾರ್ಜ್ ಶೀಟ್ ಹಾಕಿದ ಮೇಲೆ ಮತ್ತೆ ರಿ ಓಪನ್ ಮಾಡಿ, ಸಿಬಿಐಗೆ ಕೊಟ್ಟಿದ್ದು ರಾಜಕೀಯ ಪ್ರೇರಿತವಲ್ಲವಾ!? ಎಂದು ಪ್ರಶ್ನಿಸಿದರು.

ಈ ಪ್ರಕರಣದ ಮೂಲಕ ವಿನಯ ಕುಲಕರ್ಣಿ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ವಿರೋಧ ಪಕ್ಷದವರನ್ನು ಬಾಯಿ ಮುಚ್ಚಿಸಿದರೆ ತಮ್ಮ ಇಷ್ಟಬಂದ ಹಾಗೆ ಆಟ ಆಡಬಹುದು ಅನ್ನೋದು ಬಿಜೆಪಿಯವರ ವಿಚಾರ ಎಂದರು.

ರಾಜರಾಜೇಶ್ವರಿ,ಶಿರಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತೆ ಎಂದು ಗುಪ್ತಚರ ವಿಭಾಗದವರು ಯಾವ ಆಧಾರದ ಮೇಲೆ ಹೇಳುತ್ತಿದ್ದಾರೊ ಗೊತ್ತಿಲ್ಲ ಎಂದರು.

ನಾನೇ ಅಲ್ಲಿ ಕಣ್ಣಾರೆ ನೋಡಿರೋದು ಕಾಂಗ್ರೆಸ್ ಪರ ಜನರ ಒಲವು ಹೆಚ್ಚಿತ್ತು ಎಂದು ಹೇಳಿದರು.

ಮೋದಿ ಅಲೆ ಎಲ್ಲಿದೆ, ಅಲೆನೂ ಇಲ್ಲ ಪಲೆನೂ ಇಲ್ಲ ಎಂದು ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು