ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಶನಿವಾರ ಪ್ರಕಟಣೆ ಮಾಡಲಾಗಿದ್ದು, ಜ.24ರ ವರೆಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಕರಡು ಮತದಾರರ ಪಟ್ಟಿ ಪ್ರಕಟಣೆ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಜೊತೆ ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಕಚೇರಿ ಹಾಗೂ ಬಾಗಲಕೋಟೆ ಮತಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಲ್ಲ ಮತಗಟ್ಟೆಗಳಲ್ಲಿ ಹಾಗೂ ಜಾಲತಾಣ http://ceo.karnataka.gov.in/en ದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಹಾಗೂ ವಿವರ ಸರಿಯಾಗಿ ಇರುವುದನ್ನು ಪರಿಶೀಲಿಸಿಕೊಳ್ಳಬಹುದಾಗಿದೆ. ಜ.11 ಮತ್ತು 18 ರಂದು ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಅಭಿಯಾನ ಸಹ ಹಮ್ಮಿಕೊಳ್ಳಲಾಗಿದೆ. ಹೊಸ ಮತದಾರ ನೋಂದಣಿಗೆ ಫಾರಂ-6, ಅನಿವಾಸಿ ಭಾರತೀಯ ಮತದಾರರ ಹೆಸರು ಸೇರ್ಪಡೆಗೆ ಫಾರ್ಂ-6ಎ, ಆಕ್ಷೇಪಣೆ, ಹೆಸರು ತೆಗೆದು ಹಾಕಲು ಫಾರ್ಂ-7 ಹಾಗೂ ವಾಸಸ್ಥಳ ಬದಲಾವಣೆ, ವಿವರ ತಿದ್ದುಪಡಿ, ಎಫಿಕ್ ಬದಲಾವಣೆ, ಪಿಡಬ್ಲುಡಿ ಗುರುತು ಮಾಡಲು ಫಾರಂ-8ರಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಓಟರ್ ಸರ್ವಿಸ್ ಪೋರ್ಟಲ್, ಓಟರ್ ಹೆಲ್ಪಲೈನ್ ಮೊಬೈಲ್ ಆ್ಯಪ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದರು.

ಜನಪ್ರತಿನಿಧಿಗಳ ಕಾಯ್ದೆ ಅನ್ವಯ, ಮತದಾರರ ನೋಂದಣಿ ಅಧಿಕಾರಿ ಅವರ ಯಾವುದೇ ತೀರ್ಪಿನ ವಿರುದ್ದ ಜಿಲ್ಲಾಧಿಕಾರಿಗೆ ಮೇಲ್ಮನವಿ ಸಲ್ಲಿಸಬಹುದಾಗಿದೆ. ಮೊದಲ ಮೇಲ್ಮನವಿ ಅಧಿಕಾರಿಯ ತೀರ್ಪಿನ ವಿರುದ್ದ ಎರಡನೇ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದು, ಆ ಮೇಲ್ಮನವಿ ನೋಂದಣಿ ಅಧಿಕಾರಿಗಳ ನಿಯಮಗಳ ಪ್ರಕಾರ ನಿರ್ಧಿಷ್ಟಪಡಿಸಿದ ವಿಧಾನದಲ್ಲಿ ಮುಖ್ಯ ಚುನಾವಣಾಧಿಕಾರಿಗೆ ಸಲ್ಲಿಸಬೇಕಾಗುತ್ತದೆ ಎಂದು ತಿಳಿಸಿದರು.

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆಕ್ಷೇಪಣೆ ಅವಧಿಯಲ್ಲಿ ಸಾರ್ವಜನಿಕರು ನಿಗದಿತ ನಮೂನೆಗಳಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿ, ಮತದಾರರ ಗುರುತಿನ ಚೀಟಿ ಹಾಗೂ ಅರ್ಜಿಗಳ ಸಲ್ಲಿಕೆ ಮಾಹಿತಿಗಾಗಿ ಜಿಲ್ಲಾ ಚುನಾವಣಾಧಿಕಾರಿ, ಮತದಾರರ ನೋಂದಣಿ ಅಧಿಕಾರಿ, ಸಹಾಯಕ ಮತದಾರರ ನೋಂದಣಿ ಅಧಿಕಾರಿ ಹಾಗೂ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ಮತದಾನದ ದಿನ ಮತದಾರರ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಮಾಡಲು ಯಾವುದೇ ಕಾನೂನಿನಡಿ ಅವಕಾಶ ಇರುವುದಿಲ್ಲ. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಿ ದೃಢಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ವಿವಿಧ ರಾಜಕೀಯ ಪಕ್ಷಗಳ ಮುಖಂಡರಾದ ಯಮನಪ್ಪ ಶಿರೂರ, ಶ್ರೀಧರ ನಾಗರಬೆಟ್ಟ, ಅಬ್ದುಲ್ರಜಾಕ ಬೆನ್ನೂರ, ಎಸ್.ಎನ್.ರಾಂಪುರ, ಸುರೇಶ ಕೊಣ್ಣೂರ, ಹನಮಂತ ಮಾದರ ಇದ್ದರು.

ಕರಡು ಮತದಾರರ ಪಟ್ಟಿ ವಿವರ

ಬಾಗಲಕೋಟೆ: ಬಾಗಲಕೋಟೆ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯಂತೆ ಒಟ್ಟು 255503 ಮತದಾರರಿದ್ದಾರೆ. ಅದರಲ್ಲಿ 125316 ಪುರುಷ 130164 ಮಹಿಳಾ ಹಾಗೂ 23 ಇತರೆ ಮತದಾರರಿದ್ದಾರೆ.

ಸೇವಾ ಮತದಾರರು 390 ಇದ್ದು 18 ರಿಂದ 19ವರ್ಷದೊಳಗಿನ 5183 ಮತದಾರರು 2554 ಪಿಡಬ್ಲುಡಿ ಮತದಾರರು ಹಾಗೂ 2800 85 ವರ್ಷ ಮೇಲ್ಪಟ್ಟ ಮತದಾರರು ಇದ್ದಾರೆ. 319 ಮತಗಟ್ಟೆಗಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.