ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುನಗುಂದ | 'ನ್ಯಾಯಾಧೀಶರು, ವಕೀಲರಿಂದ ಮತದಾನ ಜಾಗೃತಿ'

Published 4 ಮೇ 2024, 15:52 IST
Last Updated 4 ಮೇ 2024, 15:52 IST
ಅಕ್ಷರ ಗಾತ್ರ

ಹುನಗುಂದ: ತಾಲ್ಲೂಕು ಸ್ವೀಪ್ ಸಮಿತಿಯಿಂದ ನ್ಯಾಯಾಲಯದ ಆವರಣಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾ ಮತ್ತು ಸೆಷೆನ್ಸ್‌ ಸಂಚಾರಿ ನ್ಯಾಯಾಲಯದ ನ್ಯಾಯಾಧೀಶ ಜಿ. ಎ ಮೂಲಿಮನಿ,  ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಎಚ್. ಆರ್. ಕುಲಕರ್ಣಿ, ಸಹಾಯಕ ಚುನಾವಣಾಧಿಕಾರಿ ಶ್ರೀಧರ ಗೋಟೂರ, ತಾಲ್ಲೂಕು ಸ್ವೀಪ್ ಸಮಿತಿ ಅಧ್ಯಕ್ಷೆ ತಾರಾ ಎನ್ ಅವರು ಹಸಿರು ನಿಶಾನೆ ತೋರುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜಾಥಾವೂ ನ್ಯಾಯಾಲಯದ ಆವಣದಿಂದ ವಿಜಯ ಮಹಾಂತೇಶ್ ವೃತ್ತದವರೆಗೂ ಕಾಲ ನಡೆಗೆ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಬಳಿಕ ಅಪರ ಜಿಲ್ಲಾ ಮತ್ತು ಸಂಚಾರಿ ಸೆಷನ್ಸ್ ನ್ಯಾಯಾಧೀಶ ಜಿ.ಎ.ಮೂಲಿಮನಿ ಮತದಾರರ ಪ್ರತಿಜ್ಞಾವಿಧಿ ಬೋಧಿಸಿದರು.

ಇಳಕಲ್ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಪುರಸಭೆ ಮುಖ್ಯಾಧಿಕಾರಿ ಪಿ.ಕೆ. ಗುಡದಾರಿ , ಸಿಪಿಐ ಸುನೀಲ ಸವದಿ , ಪಿಎಸ್ಐ ಲಕ್ಕಪ್ಪ ಜೋಡಹಟ್ಟಿ, ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಪಂಚಾಯ್ತಿ ಸಿಬ್ಬಂದಿ ವರ್ಗ, ಎಂಆರ್ ಡಬ್ಲ್ಯೂ, ವಿಆರ್ ಡಬ್ಲ್ಯೂ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಹುನಗುಂದ: ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸಂಚಾರಿ ಸೆಷನ್ಸ್ ನ್ಯಾಯಾಧೀಶ ಜಿ.ಎ.ಮೂಲಿಮನಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಹುನಗುಂದ: ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾ ಮತ್ತು ಸಂಚಾರಿ ಸೆಷನ್ಸ್ ನ್ಯಾಯಾಧೀಶ ಜಿ.ಎ.ಮೂಲಿಮನಿ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT