ಮಹಾಲಿಂಗಪುರ: ಪಟ್ಟಣದಲ್ಲಿ ಶುಕ್ರವಾರ ತಡರಾತ್ರಿ ಸುರಿದ ಮಳೆಯಿಂದ ಅಂಬೇಡ್ಕರ್ ವೃತ್ತದ ಬಳಿಯ ಮನೆ ಗೋಡೆ ಕುಸಿದು ಬಾಲಕ ದರ್ಶನ್ ನಾಗಪ್ಪ ಲಾತೂರ (11) ಮೃತಪಟ್ಟಿದ್ದಾನೆ.

ಬಾಲಕನ ಸಹೋದರ ಶ್ರೀಶೈಲ ಗಾಯಗೊಂಡಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಬಾಲಕನ ಕುಟುಂಬ ಪತ್ರಾಸ್ (ತಗಡಿನ ಶೆಡ್) ಮನೆಯಲ್ಲಿ ವಾಸವಿದ್ದು, ಶನಿವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಇವರ ಬದಿಯ ಮನೆಯ ಗೋಡೆ ಕುಸಿದು ಪತ್ರಾಸ್ ಮೇಲೆ ಬಿದ್ದಿದೆ. ಪತ್ರಾಸ್ ಕೆಳಗೆ ಮಲಗಿದ್ದ ಬಾಲಕ ದರ್ಶನ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಬಾಲಕನ ತಾಯಿ ರೂಪಾ, ಸಹೋದರಿ ಅದೃಷ್ಟವಶಾತ್ ಪಾರಾಗಿದ್ದಾರೆ. ಬಾಲಕನ ತಂದೆ ನಾಗಪ್ಪ ಮನೆಯಲ್ಲಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಸ್ಐ ಕಿರಣ ಸತ್ತಿಗೇರಿ ಭೇಟಿ ನೀಡಿ ಪರಿಶೀಲಿಸಿದರು.
.ಗಾದಿಗನೂರಿನಲ್ಲಿ ಸಿಲಿಂಡರ್ ಸ್ಫೋಟ: 7 ಮಂದಿಗೆ ಗಾಯ.ತಾಯಿ–ನವಜಾತ ಶಿಶು ಸಾವಿನ ಪ್ರಮಾಣ ತಗ್ಗಿಸಲು 24x7 ತ್ರಿವಳಿ ತಜ್ಞ ವೈದ್ಯರ ಲಭ್ಯತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.