ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿದ ಸಿಇಒ

Published 16 ಮೇ 2024, 15:36 IST
Last Updated 16 ಮೇ 2024, 15:36 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಕೆಲವಡಿ ಮತ್ತು ಹಂಗರಗಿ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಕುರೇರ ಭೇಟಿ ನೀಡಿ, ಪರಿಶೀಲಿಸಿದರು.

ಕೂಲಿ ಕಾರ್ಮಿಕರ ಜೊತೆ ಮಾತನಾಡಿ, ಸಮಯಕ್ಕೆ ಸರಿಯಾಗಿ ಕೂಲಿ ಜಮೆಯಾಗುತ್ತಿದೆ ಎಂಬ ಮಾಹಿತಿ ಪಡೆದುಕೊಂಡರು. ಕೂಲಿ ಕಾರ್ಮಿಕ ಹಾಜರಾತಿ ಸಹ ಪರಿಶೀಲಿಸಿದರು. ಅಲ್ಲದೇ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡಿರುವ ಸಸಿ ನೆಡುವ ಕಾಮಗಾರಿ ವೀಕ್ಷಿಸಿದರು.

ಗುಳೇದಗುಡ್ಡ ತಾಲ್ಲೂಕಿನ ಕೆಲವಡಿ, ಲಿಂಗಾಪೂರ, ಹಂಗರಗಿಯಲ್ಲಿ ಸಸಿ ನೆಡುವ ಕಾಮಗಾರಿ, ಬಾದಾಮಿ ತಾಲ್ಲೂಕಿನ ಕೆಂದೂರ, ಮಹಾಕೂಟ–ಮೊರಮ್ ರಸ್ತೆ ಕಾಮಗಾರಿ, ಬನಶಂಕರಿಯಲ್ಲಿ ಸಾಮಾಜಿಕ ಅರಣ್ಯ ವಿಭಾಗದಿಂದ ನಡೆದಿರುವ ನರ್ಸರಿ ಕಾಮಗಾರಿ ಪರಿಶೀಲನೆ ಮಾಡಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT