ಬಾಗಲಕೋಟೆ: ‘ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

ಜಿಲ್ಲಾಡಳಿತ ಆವರಣದಲ್ಲಿ ಸೋಮವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ನೂತನ ಜಿಲ್ಲಾ ಅಧ್ಯಕ್ಷ ಅನಿಲಕುಮಾರ ದಡ್ಡಿ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ‘ವಿಶ್ವದ ಮಟ್ಟದಲ್ಲಿ ಈ ಯೋಜನೆಗಳು ದಾಖಲೆಯನ್ನೂ ನಿರ್ಮಿಸಿವೆ’ ಎಂದರು.

ಜಿಲ್ಲೆಯಲ್ಲಿ ಯೋಜನೆಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ‘ಪ್ರತಿ ತಿಂಗಳು ₹121 ಕೋಟಿ ಮೊತ್ತ ಈ ಯೋಜನೆಗಳಿಗೆ ಬಳಕೆಯಾಗುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಯೋಜನೆಗಳ ಅನುಷ್ಠಾನ ಮತ್ತು ಅವುಗಳಿಂದ ದೊರೆಯುವ ಉಪಯೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ’ ಎಂದು ಹೇಳಿದರು.

ಶಾಸಕ ಜೆ.ಟಿ. ಪಾಟೀಲ ಮಾತನಾಡಿ, ‘ಕೇವಲ ಕಚೇರಿಯಲ್ಲಿ ಸಭೆ ನಡೆಸುವುದರಿಂದ ಫಲಿತಾಂಶ ಸಿಗದು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಗಳನ್ನು ನಡೆಸಿದರೆ ಹೆಚ್ಚು ಪರಿಣಾಮಕಾರಿ ಫಲ ಸಿಗುತ್ತದೆ’ ಎಂದರು.

ತಾಲ್ಲೂಕು ಘಟಕದ ಅಧ್ಯಕ್ಷರು ತಮ್ಮ ವ್ಯಾಪ್ತಿಯ ಎಲ್ಲಾ ಹಳ್ಳಿಗಳಿಗೆ ಭೇಟಿ ನೀಡಿ ಜನರಲ್ಲಿ ಅರಿವು ಮೂಡಿಸಬೇಕು. ತಾಲ್ಲೂಕು ಮಟ್ಟದಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿದ ಅಧ್ಯಕ್ಷರಿಗೆ ವೈಯಕ್ತಿಕವಾಗಿ ₹25 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಅಧ್ಯಕ್ಷ ಅನಿಲಕುಮಾರ ದಡ್ಡಿ, ‘ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲರ ಸಹಕಾರ ಅಗತ್ಯ. ಮುಂದಿನ ದಿನಗಳಲ್ಲಿ ಫಲಾನುಭವಿಗಳಿಗೆ ಯೋಜನೆ ಫಲ ತಲುಪುವಂತೆ ಶ್ರಮಿಸುತ್ತೇನೆ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ್ ಕುರೇರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.