ಬೀಳಗಿ: ಮಹಿಳೆಯ ರಕ್ಷಣೆಗಾಗಿ ಸಾಕಷ್ಟು ಕಾನೂನುಗಳಿದ್ದರೂ ಭ್ರೂಣ ಹತ್ಯೆ , ವರದಕ್ಷಿಣೆ ಕಿರುಕುಳ, ಅತ್ಯಾಚಾರ, ಲೈಂಗಿಕ ದೌರ್ಜನ್ಯದಂತಹ ಘಟನೆಗಳು ನಡೆಯುತ್ತಿರುವುದು ಇಂದಿನ ದುರಂತ ಎಂದು ಸೆಷೆನ್ಸ್ ನ್ಯಾಯಾಧೀಶೆ ಪುಷ್ಪಾ ಜೋಗೋಜಿ ಹೇಳಿದರು.

ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಕಾನೂನು ಸೇವಾ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆ, ಶಿಶು ಅಭಿವೃದ್ಧಿ ಯೋಜನೆ ಬೀಳಗಿ ಸಹಯೋಗದೊಂದಿಗೆ ಬೇಟಿ ಪಡಾವೋ ಬೇಟಿ ಬಚಾವೋ ಯೋಜನೆಯಡಿ ಗುರುವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಾನೂನುಗಳು ಹೆಣ್ಣುಮಕ್ಕಳು ಪರವಾಗಿವೆ, ಅವುಗಳ ಸದ್ಬಳಕೆ ಮಾಡಿಕೊಳ್ಳಿ. ತವರು ಮನೆಯಂತೆ ಗಂಡನ ಮನೆಯನ್ನು ಪ್ರೀತಿ, ಗೌರವದಿಂದ ಕಾಣಿರಿ ಎಂದರು.

ತಹಶೀಲ್ದಾರ್ ವಿನೋದ ಹತ್ತಳ್ಳಿ ಮಾತನಾಡಿ, ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿರದೆ ಸಮಾಜದ ಮುಖ್ಯ ವಾಹಿನಿಯಲ್ಲಿ ಭಾಗವಹಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಎಸ್.ಸಿ.ಕರಬಾನಿ ಉಪನ್ಯಾಸ ನೀಡಿದರು. ಅಂಗನವಾಡಿ ಶಿಕ್ಷಕಿಯರು ಹಾಗೂ ಸಹಾಯಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಜಿ.ಕವಟೇಕರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ ಪಾಟೀಲ, ಸಹಾಯಕ ಸರ್ಕಾರಿ ಅಭಿಯೋಜಕಿ ಶಿಲ್ಪಾ ಜೋಶಿ, ವಕೀಲ ಅಶೋಕ ಜಲಗೇರಿ, ಇನ್ನರವಿಲ್ ಅಧ್ಯಕ್ಷೆ ಶ್ರೀದೇವಿ ಪ್ಯಾಟಿಮಠ ಇದ್ದರು.

ಸಿಡಿಪಿಒ ಇಲಾಖೆಯ ಮೇಲ್ವಿಚಾರಕರಾದ ಸುಜಾತ ರಜಪೂತ, ಚಂದ್ರಕಲಾ ಚನಾಳ ಇದ್ದರು.ಗೀತಾ ನಾಯ್ಕ ನಿರೂಪಿಸಿದರು.ಸುಶೀಲಾ ಹಂಚಿನಾಳ ಸ್ವಾಗತಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.