ಗುರುವಾರ , ಜುಲೈ 29, 2021
27 °C

ಸಿದ್ದರಾಮಯ್ಯಗೆ ಅಡ್ಡಗಟ್ಟಿದ ಮಹಿಳೆಯರು: ಮದ್ಯದ ಅಂಗಡಿ ಸ್ಥಳಾಂತರಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾದಾಮಿ : ಗ್ರಾಮದಲ್ಲಿರುವ ಎಂಎಸ್ಐಎಲ್ ಮದ್ಯದ ಅಂಗಡಿಯನ್ನು ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿ ಸಮೀಪದ ಹೊಸೂರ ಗ್ರಾಮದ ಮಹಿಳೆಯರು ಮಂಗಳವಾರ ಶಾಸಕ ಸಿದ್ದರಾಮಯ್ಯ ಅವರಿಗೆ ಅಡ್ಡಗಟ್ಟಿ ತಡೆದು ಮನವಿ ಸಲ್ಲಿಸಿದರು.

ಸಿದ್ದರಾಮಯ್ಯ ಕಂದಾಯ ಇಲಾಖೆಯ ಆವರಣದಲ್ಲಿ ಮಂಗಳವಾರ ಸಮಾರಂಭ ಮುಗಿಸಿ ವೇದಿಕೆಯಿಂದ ಹೊರಗೆ ಬರುತ್ತಿದ್ದಾಗ ಮಹಿಳೆಯರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ನಂತರ ಅವರಿಗೆ ಮುತ್ತಿಗೆ ಹಾಕಿ ಸಮಸ್ಯೆಯನ್ನು ಹೇಳಿದರು.

ಎಂಎಸ್ಐಎಲ್ ಮದ್ಯದ ಅಂಗಡಿಯಿಂದ ಗ್ರಾಮದ ಜನರು ಮತ್ತು ಯುವಕರು ಕೆಟ್ಟ ಹವ್ಯಾಸಕ್ಕೆ ಬಲಿಯಾಗುವರು. ಗ್ರಾಮದಲ್ಲಿ ಮದ್ಯದ ಅಂಗಡಿ ಬೇಡ ಎಂದು ಈಗಾಗಲೇ ಮನವಿ ಸಲ್ಲಿಸಿದ್ದೇವೆ. ಮದ್ಯದ ಅಂಗಡಿಯನ್ನು ಬೇಗ ಬಂದ್ ಮಾಡಿಸಿ ಇಲ್ಲವೇ ನಮಗೆ ವಿಷ ಕೊಡಿ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು