ಸೋಮವಾರ, ಜನವರಿ 18, 2021
22 °C

ಕುಕ್ಕುಟ ಮಹಾಮಂಡಳ: ಬೆಂಡಿಗೇರಿ ಅಧ್ಯಕ್ಷರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಇಲ್ಲಿನ ನವನಗರದ ಸೆಕ್ಟರ್ ನಂ 27ರ ನಿವಾಸಿ ಯಲ್ಲಪ್ಪ ಬೆಂಡಿಗೇರಿ ಅವರಿಗೆ ರಾಜ್ಯ ಸಹಕಾರ ಕುಕ್ಕಟ ಮಹಾಮಂಡಳದ ಅಧ್ಯಕ್ಷ ಸ್ಥಾನ ಒಲಿದುಬಂದಿದೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದಲ್ಲಿ ಸಕ್ರಿಯರಾಗಿರುವ ಯಲ್ಲಪ್ಪ ಬೆಂಡಿಗೇರಿ ಬಾಗಲಕೋಟೆ ನಗರಸಭೆಗೆ ಎರಡು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ಹಿಂದೆ ಬಿಜೆಪಿ ಪರಿಶಿಷ್ಟ ಮೋರ್ಚಾದ ಉಪಾಧ್ಯಕ್ಷ, ಕಾರ್ಯದರ್ಶಿ, ಜಿಲ್ಲಾ ಘಟಕದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯರಾಗಿಯೂ ಒಂದು ಅವಧಿಗೆ ನೇಮಕಗೊಂಡಿದ್ದ ಅವರು, ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಖಜಾಂಚಿಯಾಗಿ ಕೆಲಸ ಮಾಡಿದ್ದಾರೆ. 

ಡಾ.ಬಾಬು ಜಗಜೀವನರಾಮ್ ಚರ್ಮಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದೆನು. ಆದರೆ ಅನಿರೀಕ್ಷಿತವಾಗಿ ಮಹಾಮಂಡಳದ ಅಧ್ಯಕ್ಷ ಸ್ಥಾನ ಕೊಟ್ಟಿದ್ದಾರೆ. ಪಕ್ಷ ವಹಿಸಿದ ಜವಾಬ್ದಾರಿ ಇದು. ಸಂತೋಷದಿಂದ ಒಪ್ಪಿಕೊಳ್ಳುತ್ತೇನೆ. ಯಾವುದೇ ಫಲಾಪೇಕ್ಷೆ ಇಲ್ಲದೇ ನಿಷ್ಠೆಯಿಂದ ಕೆಲಸ ಮಾಡಿದರೆ ಪಕ್ಷ ಗುರುತಿಸುತ್ತದೆ ಎಂಬುದಕ್ಕೆ ನಾನೇ ಉದಾಹರಣೆ. ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಮಾಡಿ ಒಳ್ಳೆಯ ಹೆಸರು ತರಲಿದ್ದೇನೆ ಎಂದು ಯಲ್ಲಪ್ಪ ಬೆಂಡಿಗೇರಿ ’ಪ್ರಜಾವಾಣಿ‘ಗೆ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.