ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೇರದಾಳ: ಕೃಷ್ಣಾ ನದಿಯಲ್ಲಿ ಕಾಲುಜಾರಿ ಬಿದ್ದು ಯುವಕ ಸಾವು

Published 20 ಮೇ 2024, 16:23 IST
Last Updated 20 ಮೇ 2024, 16:23 IST
ಅಕ್ಷರ ಗಾತ್ರ

ತೇರದಾಳ: ತಾಲ್ಲೂಕಿನ ಹಳಿಂಗಳಿ ಗ್ರಾಮದ ಬಳಿಯ ಕೃಷ್ಣಾ ನದಿಯಲ್ಲಿ ಸೋಮವಾರ ಕಾಲುಜಾರಿ ಬಿದ್ದು ಸ್ಥಳೀಯ ಯುವಕ ಆನಂದ ಸುರೇಶ ಲೋಹಾರ (26) ಮೃತಪಟ್ಟಿದ್ದಾನೆ.

ಆನಂದ್‌ ಗೆಳೆಯರೊಂದಿಗೆ ಕೃಷ್ಣಾ ನದಿ ದಡಕ್ಕೆ ತೆರಳಿದ್ದರು. ಈಜು ಬಾರದೇ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊರ ತೆಗೆದಿದ್ದಾರೆ. ಠಾಣಾಧಿಕಾರಿ ಅಪ್ಪು ಐಗಳಿ ಸ್ಥಳಕ್ಕೆ ಭೇಟಿ ನೀಡಿದ್ದು, ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT