ಸೋಮವಾರ, ಆಗಸ್ಟ್ 2, 2021
21 °C

ಯಡಹಳ್ಳಿ: ಘಟಪ್ರಭಾ ನದಿಯಲ್ಲಿ ಮುಳುಗಿ ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ತಾಲ್ಲೂಕಿನ ಯಡಹಳ್ಳಿ ಬಳಿ ಶನಿವಾರ ಘಟಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಯುವಕ ಮುಳುಗಿ ಸಾವನ್ನಪ್ಪಿದ್ದಾರೆ.

ಯಡಹಳ್ಳಿಯ ಡೋಂಗ್ರಿಸಾಬ್ ನದಾಫ್ (21) ಸಾವಿಗೀಡಾದ ಯುವಕ.

ಮೂವರು ಸ್ನೇಹಿತರ ಜೊತೆ ಈಜಲು ಹೋಗಿದ್ದ ಡೋಂಗ್ರಿಸಾಬ್, ಈಜುವಾಗ ಏಕಾಏಕಿ ಕಣ್ಮರೆಯಾಗಿದ್ದರು. ಹುಡುಕಾಟ ನಡೆಸಿದಾಗ ಪತ್ತೆಯಾಗಿರಲಿಲ್ಲ. ಡೋಂಗ್ರಿಸಾಬ್ ಅವರನ್ನು ಮೊಸಳೆ ಸೆಳೆದೊಯ್ದಿರಬಹುದು ಎಂದು ಕುಟುಂಬದ ಸದಸ್ಯರು ಭಾವಿಸಿದ್ದರು.

ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಮೂರು ತಾಸು ನದಿಯಲ್ಲಿ ಹುಡುಕಾಟ ನಡೆಸಿ ಶವ ಹೊರಕ್ಕೆ ತೆಗೆದಿದ್ದಾರೆ. ಯುವಕ ಈಜುವಾಗ ಮುಳುಗಿ ಸತ್ತಿದ್ದಾನೆ ಎಂದು ತಿಳಿದುಬಂದಿದೆ.

ಮೃತದೇಹ ಕಂಡು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಕಲಾದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು