ಬಾಗಲಕೋಟೆ: ಜಿಲ್ಲೆಯ ಜಿಲ್ಲಾ ಪಂಚಾಯ್ತಿ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ.ಆಕಾಶ್ ಎಸ್ ಅವರನ್ನು ವರ್ಗಾವಣೆ ಮಾಡಿ ಆಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಟಿ. ಭೂಬಾಲನ್ ಅವರ ಹುದ್ದೆಗೆ ಆಕಾಶ್ ಅವರನ್ನು ವರ್ಗ ಮಾಡಲಾಗಿದೆ. 2019ರ ಐಎಎಸ್ ಬ್ಯಾಚಿನ ಅಧಿಕಾರಿಯಾಗಿದ್ದು, ಕೊಡಗಿನ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.