ಬಾಗಲಕೋಟೆ: ರಾಜ್ಯದಲ್ಲಿ ಕೋಳಿ ಉದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ರೈತರು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪಶು ವೈದ್ಯಕೀಯ ಇಲಾಖೆ ಉಪನಿರ್ದೇಶಕ ಡಾ. ಮಂಜುನಾಥ ಪಾಳೇಗಾರ್ ಸಲಹೆ ನೀಡಿದರು.

ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದಿಂದ ನಗರದಲ್ಲಿ ಏರ್ಪಡಿಸಿದ್ದ ಕೋಳಿ ಸಾಕಾಣಿಕೆ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.

ಕೋಳಿ ಸಾಕಾಣಿಕೆಗೆ ಇಲಾಖೆಯಿಂದ ದೊರಕುವ ಸಹಾಯಧನ ಮತ್ತು ಇತರ ಯೋಜನೆಗಳ ಕುರಿತು ವಿವರ ನೀಡಿದರು.

500 ಮಾಂಸದ ಕೋಳಿ ಫಾರ್ಮ್ ಪ್ರಾರಂಭಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ರೂ.16,600 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಜನಾಂಗದ ಫಲಾನುಭವಿಗಳಿಗೆ ರೂ.25,600ಗಳ ವರೆಗೆ ಸಹಾಯಧನ ಇಲಾಖೆಯಿಂದ ಆದ್ಯತೆಯ ಮೇರೆಗೆ ನೀಡಲಾಗುವುದು ಎಂದರು.

ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಿಂದ ರೈತರು ಶಿಬಿರದಲ್ಲಿ ಭಾಗವಹಿಸಿದ್ದರು.
ಫ್ಯೂಚರ್ ಗ್ರೀನ್ ಸಂಸ್ಥೆಯ ಮುಖ್ಯಸ್ಥ ಡಾ.ಬಿ.ಆರ್. ಅಥಣಿ, ಬಿ.ಆರ್. ಹಿರೇಮಠ, ಎಸ್.ಪಿ. ಜಗಲಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.