ಬಾಗಲಕೋಟೆ: ಜೆಡಿಎಸ್ ಯುವ ಚೇತನ ಸಮಾವೇಶ ಇದೇ 1ರಂದು ನವನಗರದ ಕಲಾಭವನದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಜಿಲ್ಲಾ ಘಟಕದ ಅಧ್ಯಕ್ಷ ಬಸವಪ್ರಭು ಸರನಾಡಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಕ್ಷಕ್ಕೆ ಯುವ ಸಮುದಾಯವನ್ನು ಆಕರ್ಷಿಸುವ ಉದ್ದೇಶದಿಂದ ಜೆಡಿಎಸ್ ಯುವ ಘಟಕದ ರಾಜಾಧ್ಯಕ್ಷ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ `ಯುವ ಚೇತನ~ ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಸಿನಿಮಾ ನಟಿ ಪೂಜಾ ಗಾಂಧಿ, ಮಾಜಿ ಸಚಿವರಾದ ಬಸನಗೌಡ ಪಾಟೀಲ ಯತ್ನಾಳ, ಬಸವರಾಜ ಹೊರಟ್ಟಿ ಸೇರಿದಂತೆ ಪ್ರಮುಖ ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಸಮಾವೇಶದ ಅಂಗವಾಗಿ ಜೆಡಿಎಸ್ ಕಚೇರಿ ಆವರಣದಿಂದ ಪಕ್ಷದ ಯುವ ಕಾರ್ಯಕರ್ತರ ಬೈಕ್ ರ್ಯಾಲಿ ನಡೆಯಲಿದೆ. ಮೂರರಿಂದ ನಾಲ್ಕು ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಈ ಸಂದರ್ಭದಲ್ಲಿ ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿ ತೊರೆದು ಹಲವು ಮಂದಿ ಯುವಕರು ಜೆಡಿಎಸ್ಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದರು.

ಜೆಡಿಎಸ್ನಲ್ಲೇ ಇರುತ್ತೇನೆ:ಜಿಲ್ಲೆಯ ಕಾಂಗ್ರೆಸ್ ಮತ್ತು ಬಿಜೆಪಿಯ ಕೆಲ ಮುಖಂಡರು ಬಸವಪ್ರಭು ಸರನಾಡಗೌಡ ಜೆಡಿಎಸ್ ಬಿಡುತ್ತಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ತಿಳಿದುಬಂದಿದೆ, ಪಕ್ಷದ ಕಾರ್ಯಕರ್ತರಲ್ಲಿ ಅನಗತ್ಯ ಗೊಂದಲ ಸೃಷ್ಠಿಸಲಾಗುತ್ತಿದೆ, ಕಾರ್ಯಕರ್ತರು ಇದಕ್ಕೆ ಕಿವಿಗೊಡಬಾರದು ಎಂದರು.

ಜೆಡಿಎಸ್ನಿಂದಲೇ ರಾಜಕೀಯ ಆರಂಭಿಸಿದ್ದೇನೆ, ಇದೇ ಪಕ್ಷದಲ್ಲಿ ಕೊನೆವರೆಗೂ ಇರುತ್ತೇನೆ ಎಂದು ಹೇಳಿದರು.
ಬೀಳಗಿಯಿಂದಲೇ ಸ್ಪರ್ಧೆ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬೀಳಗಿ ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ ಎಂದು ಹೇಳಿದ ಅವರು, ಬೀಳಗಿಯಲ್ಲಿ ಸಚಿವ ಮುರುಗೇಶ ನಿರಾಣಿ ಬೆಂಬಲಿಗರು ದಬ್ಬಾಳಿಕೆ ರಾಜಕೀಯ ಮಾಡುತ್ತಿದ್ದಾರೆ, ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಖಂಡನೆ: ಅಪ್ಪ, ಮಕ್ಕಳನ್ನು ವಿಧಾನಸೌಧದ ಮೆಟ್ಟಿಲು ಹತ್ತದಂತೆ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿರುವ ಹೇಳಿಕೆಯನ್ನು ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷ ಶಂಭುಲಿಂಗಪ್ಪ ಅಕ್ಕಿಮರಡಿ ತೀವ್ರವಾಗಿ ಖಂಡಿಸಿದರು.

ಉಪ ಮುಖ್ಯಮಂತ್ರಿಯಾಗುವಾಗ ಇದೇ ಅಪ್ಪ- ಮಕ್ಕಳು ಯಡಿಯೂರಪ್ಪಗೆ ಬೇಕಾಗಿದ್ದರು ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಯುವ ಘಟಕದ ಅಧ್ಯಕ್ಷ ಶಿವಪ್ರಸಾದ ಗದ್ದಿ, ಅಶೋಕ ಲಾಗಲೂಟಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದಾಕ್ಷಾಯಿಣಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.