ಬಾಗಲಕೋಟೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಗಳನ್ನು ಪ್ರತಿಯೊಬ್ಬರೂ ಸ್ಮರಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಮನೋಜ್ ಜೈನ್ ಹೇಳಿದರು.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಲಯನ್ಸ್ ಕ್ಲಬ್ ಮತ್ತು ರೋಟರಿ ಕ್ಲಬ್ ಆಶ್ರಯದಲ್ಲಿ ಶುಕ್ರವಾರ ನವನಗರದ ಸೆಕ್ಟರ್ ನಂ.44ರಲ್ಲಿರುವ ಎಸ್ ಸಿ, ಎಸ್ ಟಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರ 57 ನೇ ಮಹಾಪರಿನಿರ್ವಾಣ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಡಾ.ಬಿ.ಆರ್. ಅಂಬೇಡ್ಕರ್ ದಲಿತ ಕುಟುಂಬದಲ್ಲಿ ಜನಿಸಿ ರಾಷ್ಟ್ರಕ್ಕೆ ಮಾದರಿ. ಅವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನಮ್ಮ ಜೀವನದಲ್ಲೂ ಸಾಧನೆ ಮಾಡಬಹುದು ಎಂದು ಹೇಳಿದರು.

ಸತತ ಪರಿಶ್ರಮದಿಂದ ಯಶಸ್ಸು ಸಿಗಲಿದ್ದು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆಯೊಡ್ಡುವ ಮೂಲಕ ಜೀವನದಲ್ಲಿ ಮುಂದೆ ಬರಬೇಕು ಎಂದು ಸಲಹೆ ನೀಡಿದರು.

ರಕ್ತದಾನ: ಜಿಲ್ಲಾಧಿಕಾರಿ ಮನೋಜ ಜೈನ್ ಅವರು ರಕ್ತದಾನ ಮಾಡಿದರು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಕೃಷ್ಣಾ ಓಗೇಣ್ಣವರ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜಿ. ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಕುದರಿಕಾರ, ಸದಸ್ಯ ಯಲ್ಲಪ್ಪ ಬೆಂಡಿಗೇರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜೋಶಿ, ಉಪವಿಭಾಗಾಧಿಕಾರಿ ಶಂಕರ ವಣಕ್ಯಾಳ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಅಂಬೇಡ್ಕರ್ ಆಶಾಕಿರಣ
ಮುಧೋಳ: ಡಾ.ಬಾಬಾಸಾಹೇಬ ಅಂಬೇಡ್ಕರ್ ಸಮಾಜ ಸುಧಾರಣೆಗೆ, ದಲಿತೋದ್ಧಾರಕ್ಕೆ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ ಚೇತನ’ ಎಂದು ರಾಜ್ಯ ದಲಿತ ಸಂಘರ್ಷ ಸಮಿತಿ (ಸಾಗರಬಣ) ಗ್ರಾಮ ಸಂಚಾಲಕ ಶಿವಾನಂದ ಕಾಂಬಳೆ ಹೇಳಿದರು.

ಮುಧೋಳ ತಾಲ್ಲೂಕು ಮಳಲಿ ಗ್ರಾಮದಲ್ಲಿ ಶುಕ್ರವಾರ ಡಾ.ಬಾಬಾಸಾಹೇಬ ಅಂಬೇಡ್ಕರ್ 57 ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುಮಾರ ಹಾದಿಮನಿ, ಮಹಾಂತೇಶ ಕಾಂಬಳೆ, ಪಾರೀಶ ಕಾಂಬಳೆ, ಮಂಜುನಾಥ ಹಾದಿಮನಿ, ಬಸಲಿಂಗ ದೊಡಮನಿ, ಅರುಣ ಕಾಂಬಳೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.