ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೋಟಗಾರಿಕೆ ವಿ.ವಿ: ವರ್ಗಾವಣೆ ತಡೆಗೆ ಸಚಿವರ ಪತ್ರ

Last Updated 7 ಜೂನ್ 2019, 19:11 IST
ಅಕ್ಷರ ಗಾತ್ರ

ಬಾಗಲಕೋಟೆ: ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಜೂನ್‌ 6ರಂದು ಅಧ್ಯಾಪಕರು, ವಿಸ್ತರಣಾ ನಿರ್ದೇಶಕರು ಸೇರಿದಂತೆ ಬೇರೆ ಬೇರೆ ವಿಭಾಗದ 21 ಮಂದಿ ವರ್ಗಾವಣೆ ಮಾಡಲಾಗಿದೆ. ಅದೀಗತೋಟಗಾರಿಕೆ ಇಲಾಖೆ ಸಚಿವ ಎಂ.ಸಿ.ಮನಗೂಳಿ ಅವರ ಕೆಂಗಣ್ಣಿಗೆ ಗುರಿಯಾಗಿದೆ.

ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಕೆ.ಎಂ.ಇಂದಿರೇಶ ತಮ್ಮ ಗಮನಕ್ಕೆ ಬಾರದೇ ಏಕಪಕ್ಷೀಯವಾಗಿ ಶಿಕ್ಷಕ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದ್ದಾರೆ. ಅದನ್ನು ಕೂಡಲೇ ತಡೆ ಹಿಡಿಯುವಂತೆ ಸಚಿವ ಎಂ.ಸಿ.ಮನಗೂಳಿ ತಮ್ಮ ಇಲಾಖೆಯ ಕಾರ್ಯದರ್ಶಿಗೆ ಶುಕ್ರವಾರ ಪತ್ರ ಬರೆದಿದ್ದಾರೆ. ಅದರ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ.

‘ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವಾಗ ನನ್ನ ಗಮನಕ್ಕೆ ತಂದು ಕ್ರಮ ಕೈಗೊಳ್ಳುವಂತೆ ಹಂಗಾಮಿ ಕುಲಪತಿಗೆ ಸೂಚಿಸಿದ್ದೇನೆ. ಹಾಗಿದ್ದರೂ ಕೂಡ ಏಕ ಪಕ್ಷೀಯವಾಗಿ ವರ್ಗಾವಣೆ, ಪರಸ್ಪರ ವರ್ಗಾವಣೆ, ಕೆಲಸದಲ್ಲಿ ಹೊಂದಾಣಿಕೆಯ ಖಾಯಂಗೊಳಿಸುವಿಕೆ ಆದೇಶಗಳನ್ನು ಹೊರಡಿಸಿದ್ದಾರೆ. ಅದು ವಿಷಾದದ ಸಂಗತಿ. ಸದರಿ ಆದೇಶಗಳನ್ನು ಕೂಡಲೇ ಜಾರಿಗೆ ಬರುವಂತೆ ತಡೆಹಿಡಿಯಲು ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಿ ತಮಗೆ ವರದಿ ಸಲ್ಲಿಸುವಂತೆ ಇಲಾಖೆಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಮನಗೂಳಿ ಉಲ್ಲೇಖಿಸಿದ್ದಾರೆ.

ವಿ.ವಿಯ ಶೈಕ್ಷಣಿಕ ಹಿತ ಅಡಗಿದೆ

‘ವರ್ಗಾವಣೆ ಪ್ರಕ್ರಿಯೆಯಲ್ಲಿ ಯಾವ ಲೋಪವೂ ಆಗಿಲ್ಲ. ವಿಶ್ವವಿದ್ಯಾಲಯದ ಶೈಕ್ಷಣಿಕ ಹಿತದೃಷ್ಟಿ, ಶಿಕ್ಷಕರ ಕೆಲಸದ ಸಾಮರ್ಥ್ಯ ಹೆಚ್ಚಿಸಲು ನಿಯಮಾವಳಿ ಅನ್ವಯವೇ ವರ್ಗಾವಣೆ ಮಾಡಿರುವುದಾಗಿ’ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ಕೆ.ಎಂ.ಇಂದಿರೇಶ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

‘ಇದರಲ್ಲಿ ಪ್ರಾಮಾಣಿಕವಾಗಿ ವಿಶ್ವವಿದ್ಯಾಲಯದ ಹಿತ ಅಡಗಿದೆ. ಬೇರೆ ವಿವಿ ಕುಲಪತಿಗಳಂತೆ ನಮಗೂ ಇರುವ ಅಧಿಕಾರ ಬಳಸಿಕೊಂಡು ನೌಕರರ ವರ್ಗಾವಣೆ ಮಾಡಿದ್ದೇನೆ. ಇದಕ್ಕೆ ಕಳೆದ ಮೂರು ವರ್ಷಗಳಿಂದ ಬೇಡಿಕೆ ಇತ್ತು. ಈ ಬಗ್ಗೆ ಸಚಿವರಿಗೂ ಮನವರಿಕೆ ಮಾಡಿಕೊಡುವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT