ಬಾಗಲಕೋಟೆ: `ಪ್ರಥಮ ಬಾರಿಗೆ ನಾನು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಜಿಲ್ಲೆಯ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ನೌಕರರು, ಸಾರ್ವಜನಿಕರು ಮತ್ತು ಮಾಧ್ಯಮದವರ ಸಹಕಾರದೊಂದಿಗೆ ಉತ್ಸಾಹಪೂರ್ವಕವಾಗಿ, ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸಲು ಬಯಸಿದ್ದೇನೆ' ಎಂದು ನೂತನ ಜಿಲ್ಲಾಧಿಕಾರಿ ಮನೋಜ್ ಜೈನ್ ಹೇಳಿದರು.

ನವನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಜಾಮದಾರ ಅವರಿಂದ ಆರಂಭಗೊಂಡು ಎ.ಎಂ. ಕುಂಜಪ್ಪ ಅವರ ಅವಧಿಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು, ಸಾರ್ವಜನಿಕರ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡುವುದಾಗಿ ಹೇಳಿದರು. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ ಹರಿಯುವ ನದಿ ವ್ಯಾಪ್ತಿಯಲ್ಲಿ ನೆರೆ ಉಂಟಾಗುವ ಸಾಧ್ಯತೆ ಇರುವುದರಿಂದ ಅದಕ್ಕೆ ಹೆಚ್ಚಿನ ಆದ್ಯತೆ ನೀಡುವುದಾಗಿ ತಿಳಿಸಿದರು.

`ಈ ಮೊದಲು ರಾಯಚೂರು ಜಿ.ಪಂ. ಸಿಇಒ, ಗುಲ್ಬರ್ಗಾ ಮಹಾನಗರ ಪಾಲಿಕೆ ಆಯುಕ್ತ, ಬೀದರ್ ಉಪ ವಿಭಾಗಾಧಿಕಾರಿ ಮತ್ತು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿರುವ ಅನುಭವ ಇದೆ. ಹುದ್ದೆಯ ಜವಾಬ್ದಾರಿ ಮತ್ತು ಕರ್ತವ್ಯ ನಿರ್ವಹಣೆ ಬಗ್ಗೆ ಅರಿಯಲು ಮೂರು ತಿಂಗಳ ಕಾಲಾವಕಾಶ ಅಗತ್ಯವಿದೆ' ಎಂದರು.

`ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕನಾಗಿ ಒಂದೂವರೆ ವರ್ಷದಲ್ಲಿ ಸಂಸ್ಥೆಯ ಅಭಿವೃದ್ಧಿಗೆ ಪ್ರಯತ್ನಿಸಿದ್ದೇನೆ. ನಷ್ಟದಲ್ಲಿದ್ದ ಸಂಸ್ಥೆ ಸುಧಾರಣೆಗೊಂಡಿದೆ. ಖಾಸಗಿ ಬಸ್ ಸೇವೆಗೆ ಸ್ಪರ್ಧಿಸುವ ಸಲುವಾಗಿ ಇತ್ತೀಚೆಗೆ ಹೊಸದಾಗಿ ಹಸಿರು ಬಣ್ಣದ ವೇಗದೂತ ಬಸ್ಗಳ ಸೇವೆಯನ್ನು ಆರಂಭಿಸಲಾಗಿದ್ದು, ಪರಿಣಾಮಕಾರಿಯಾಗಿದೆ' ಎಂದರು.

`ಬಾಗಲಕೋಟೆ- ಹುಬ್ಬಳ್ಳಿ ನಡುವೆ 20 ಹಸಿರು ಬಸ್ಗಳು ಸಂಚಾರ ಆರಂಭಿಸಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಿದೆ. ಇಲ್ಲಿನ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಬಸ್ ಸೌಕರ್ಯ ಒದಗಿಸಲು ಆದ್ಯತೆ ನೀಡುವೆ' ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರಗೌಡ, ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜಿ. ಪಾಟೀಲ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದು, ನೂತನ ಜಿಲ್ಲಾಧಿಕಾರಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಕುಂಜಪ್ಪ ಅವರನ್ನು ಬೀಳ್ಕೊಟ್ಟರು.

ಮೂಲತಃ ರಾಜಸ್ತಾನದವರಾದ ಮನೋಜ್ ಜೈನ್ 2006ರ ಕರ್ನಾಟಕ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದಾರೆ. ರಾಜ್ಯ ಸರ್ಕಾರದ ಬುಧವಾರ ಇವರನ್ನು ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿದೆ. ಮನೋಜ್ ಜೈನ್ಗೆ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಆಯುಕ್ತರಾಗಿ ಹೆಚ್ಚುವರಿ ಹೊಣೆಯನ್ನೂ ವಹಿಸಲಾಗಿದೆ. ನೂತನ ಜಿಲ್ಲಾಧಿಕಾರಿ ಅವರ ಮೊಬೈಲ್ ಸಂಖ್ಯೆ 9480031234ನ್ನು ಅಗತ್ಯ ಸಂದರ್ಭದಲ್ಲಿ ಸಾರ್ವಜನಿಕರು ಸಂಪರ್ಕಿಸಬಹುದಾಗಿದೆ.

ಕಾಡುತ್ತಿದೆ ವರ್ಗಾವಣೆ ಭೂತ!
ಬಾಗಲಕೋಟೆ: ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆ ಪರ್ವ ನಿರಂತರವಾಗಿದ್ದು, ಸರ್ಕಾರಿ ಕಚೇರಿಯಲ್ಲಿ ದಿನ ಬೆಳಗಾದರೆ ವರ್ಗಾವಣೆಯದೇ ಚರ್ಚೆ ಬಿರುಸುಗೊಂಡಿದೆ.

ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರ್, ಪಿಎಸ್ಐ ಒಳಗೊಂಡು ಗ್ರಾ.ಪಂ. ಪಿಡಿಒ ವರೆಗೂ ವರ್ಗಾವಣೆ ಪಟ್ಟಿಯನ್ನು ತಯಾರಿಸಿಕೊಂಡಿರುವ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಅವರ ಹಿಂಬಾಲಕರು ದಿನಕ್ಕೊಂದು ಅಧಿಕಾರಿಯನ್ನು ವರ್ಗಾವಣೆಗೊಳಿಸಿ ತಮಗೆ ಬೇಕಾದ ಅಧಿಕಾರಿಗಳನ್ನು ಕರೆತರುತ್ತಿದ್ದಾರೆ.

ಖಚಿತ ಮಾಹಿತಿ ಪ್ರಕಾರ ಜಿಲ್ಲಾಧಿಕಾರಿ ವರ್ಗಾವಣೆ ವಿಷಯ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೇ ಬಂದಿಲ್ಲ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಅವರ ಆಪ್ತ ಶಾಸಕರೊಬ್ಬರು ಬೆಂಗಳೂರಿನಲ್ಲಿ ಪಟ್ಟು ಹಿಡಿದು ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸಿದ್ದಾರೆ ಎನ್ನಲಾಗಿದೆ.

ಜಿಲ್ಲೆಯ ವಿವಿಧ ಇಲಾಖೆಯಲ್ಲಿ ಹತ್ತಾರು ವರ್ಷದಿಂದ ಬೇರುಬಿಟ್ಟಿರುವ ಮತ್ತು ಭ್ರಷ್ಟಾಚಾರ ಬಹಿರಂಗವಾಗಿ, ಅಮಾನತುಗೊಂಡ ಅನೇಕ ಅಧಿಕಾರಿಗಳು ಮಾತ್ರ ಜನಪ್ರತಿನಿಧಿಗಳ ಕೃಪಾಶೀರ್ವಾದದಿಂದ ಮತ್ತೆ ತಮ್ಮ ಸ್ಥಾನದಲ್ಲೇ ಭದ್ರವಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.