ತಾಲ್ಲೂಕಿನ ಮೋತಲಕುಂಟ ಗ್ರಾಮದ ಗೋವಿಂದ ಎಂಬಾತ ಬೊಲೆರೋ ವಾಹನದಲ್ಲಿ ಸಂಡೂರು ಸಮೀಪದ ಕೃಷ್ಣಾನಗರದಿಂದ ಅಕ್ಕಿಯನ್ನು ಕಡಿಮೆ ಬೆಲೆಗೆ ಖರೀದಿಸಿ ಅಧಿಕೃತ ಪರವಾನಗಿ ಇಲ್ಲದೆ ಕಾಳಸಂತೆಯಲ್ಲಿ ಮಾರಾಟ ಮಾಡಲು ತೆರಳುತ್ತಿದ್ದಾಗ ಆಹಾರ ನಿರೀಕ್ಷಕ ಶ್ರೀನಿವಾಸ್ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸಂಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.