ಬಳ್ಳಾರಿ: ತಾಲ್ಲೂಕು ಕುಂಟನಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 18 ಜನ ಅಸ್ವಸ್ಥಗೊಂಡಿದ್ದು, ಇಬ್ಬರನ್ನು ವಿಮ್ಸ್‌ಗೆ ದಾಖಲಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿ ಡಾ.ಎಚ್.ಎಲ್ ಜನಾರ್ದನ್ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮೋಹನ್ ಕುಮಾರಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರಿಗೆ ಪೂರೈಕೆ ಆಗುತ್ತಿರುವ ಗ್ರಾಮದ ಹೊರ ವಲಯದಲ್ಲಿ ಹರಿಯುತ್ತಿರುವ ವೇದಾವತಿ ನದಿ ನೀರು ಪರಿಶೀಲಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ವೈದ್ಯರ ತಂಡ ಬೀಡು ಬಿಟ್ಟಿದೆ.

ಕೆಲವರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ತೆರಳಿ ದಾಖಲಾಗಿದ್ದಾರೆ. ‘ಈ ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ’ ಎಂಬ ಆರೋಪ ಕೇಳಿ ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.