ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಳ್ಳಾರಿ ಮಹಾನಗರ ಪಾಲಿಕೆಗೆ 2023ರ ನವೆಂಬರ್ನಿಂದ ಈವರೆಗೂ 32 ಲೇಔಟ್ಗಳನ್ನು ಹಸ್ತಾಂತರ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ .ಎಸ್. ಸುರೇಶ್ ಅವರು ತಿಳಿಸಿದ್ದಾರೆ.

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರವು ಅನುಮೋದಿತ ಬಡಾವಣೆಗಳನ್ನು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹಸ್ತಾಂತರ ಮಾಡುವಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವ ಕುರಿತು ಬಳ್ಳಾರಿ – ವಿಜಯನಗರ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ, ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಪರಿಷತ್ನಲ್ಲಿ ಮಂಗಳವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

‘ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆಯನ್ನು ಪರಿಶೀಲಿಸಿದ ನಂತರವೇ, ಬಡಾವಣೆಗಳನ್ನು ನಗರಾಭಿವೃದ್ಧಿ ಪ್ರಾಧಿಕಾರದಿಂದ ಪಾಲಿಕೆಗೆ ಹಸ್ತಾಂತರ ಮಾಡಲಾಗುತ್ತದೆ. ನಂತರದ ದಿನಗಳಲ್ಲಿ, ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಮಹಾನಗರ ಪಾಲಿಕೆಯೇ ನಿರ್ವಹಣೆ ಮಾಡಿ, ಹೊಸ ಸಂಪರ್ಕಗಳನ್ನು ನೀಡುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.