ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

430 ಲೀಟರ್‌ ಮದ್ಯ, ₹15.13 ಲಕ್ಷ ಮೌಲ್ಯದ ವಸ್ತು ವಶ

Published 19 ಮಾರ್ಚ್ 2024, 5:52 IST
Last Updated 19 ಮಾರ್ಚ್ 2024, 5:52 IST
ಅಕ್ಷರ ಗಾತ್ರ

ಬಳ್ಳಾರಿ:  ಲೋಕಸಭೆ ಸಾರ್ವತ್ರಿಕ ಚುನಾವಣೆ 2024ರ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 430.96 ಲೀಟರ್ (₹1,28,202) ಮದ್ಯ ಮತ್ತು ಸೂಕ್ತ ದಾಖಲೆ (ಇ-ವೇ ಬಿಲ್) ಇಲ್ಲದ 10,160 ಕೆಜಿ (₹15,13,840 ಮೌಲ್ಯದ) ಒಣ ಮೆಣಸಿನಕಾಯಿ, 5 ವಾಹನಗಳನ್ನು ವಶಪಡಿಸಿಕೊಂಡು 24 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಾದ್ಯಂತ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈಗಾಗಲೇ ವಿವಿಧ ತಂಡಗಳನ್ನು ರಚಿಸಲಾಗಿದೆ. ಅವುಗಳು ಕಾರ್ಯಪ್ರವೃತ್ತವಾಗಿದೆ. 16 ಫ್ಲೈಯಿಂಗ್ ಸ್ಕ್ವಾಡ್‌, 24 ಎಸ್‍ಎಸ್‍ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ.

ಶನಿವಾರದಂದು, ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ 107.21 ಲೀಟರ್ (₹9,349) ಮದ್ಯ ಹಾಗೂ ಮುಖ್ಯ ತಂತ್ರಜ್ಞಾನ ಅಧಿಕಾರಿಯವರಿಂದ ಸೂಕ್ತ ದಾಖಲೆಯಿಲ್ಲದ (ಇ-ವೇ ಬಿಲ್) 10,160 ಕೆಜಿ (15,13,840 ರೂ. ಮೌಲ್ಯ) ಒಣಮೆಣಸಿನಕಾಯಿ, 3 ವಾಹನಗಳನ್ನು (₹95 ಸಾವಿರ ) ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ಕಾನೂನು ಉಲ್ಲಂಘಿಸಿದ್ದಕ್ಕಾಗಿ ಒಟ್ಟು 19 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಭಾನುವಾರದಂದು, ಅಬಕಾರಿ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ 323.75 ಲೀಟರ್ (₹1,18,853) ಮದ್ಯ ಮತ್ತು 2 ವಾಹನ (ರೂ.2,50,000 ಬೆಲೆ) ಜಪ್ತಿ ಮಾಡಲಾಗಿದೆ. ಒಟ್ಟು 4 ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT