ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಂಪ್ಲಿ: ವಸತಿ ನಿಲಯ ಆರಂಭಕ್ಕೆ ₹80 ಕೋಟಿ ಮಂಜೂರು

Published : 11 ಸೆಪ್ಟೆಂಬರ್ 2024, 16:02 IST
Last Updated : 11 ಸೆಪ್ಟೆಂಬರ್ 2024, 16:02 IST
ಫಾಲೋ ಮಾಡಿ
Comments

ಕಂಪ್ಲಿ: ‘ಕಂಪ್ಲಿ ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಎಸ್‌ಸಿ, ಎಸ್‌ಟಿ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿವಿಧ ಸರ್ಕಾರಿ ವಸತಿ ನಿಲಯಗಳ ಸ್ಥಾಪನೆಗೆ ₹80ಕೋಟಿ ಮಂಜೂರಾಗಿದೆ’ ಎಂದು ಶಾಸಕ ಜೆ.ಎನ್. ಗಣೇಶ್ ತಿಳಿಸಿದರು.

ಸ್ಥಳೀಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ‘ತಾಲ್ಲೂಕಿನ ಹಂಪಾದೇವನಹಳ್ಳಿಯಲ್ಲಿ ₹44 ಕೋಟಿ ವೆಚ್ಚದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಿದ್ಯಾರ್ಥಿ ವಸತಿ ನಿಲಯ ಆರಂಭಿಸಲಾಗುವುದು’ ಎಂದರು.

ತಾಲ್ಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆರಂಭ ಕುರಿತಂತೆ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ ಪ್ರಸ್ತಾವ ಸಲ್ಲಿಸಿದ್ದೇನೆ. ಪ್ರಸಕ್ತ ವರ್ಷ ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಆದ್ಯತೆ ನೀಡಿರುವುದಾಗಿ ತಿಳಿಸಿದರು.

ಪ್ರಾಚಾರ್ಯ ಮೊಹಮ್ಮದ್ ಶಫಿ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಶಿವರಾಜ, ಪುರಸಭೆ ಸದಸ್ಯೆ ಹೇಮಾವತಿ ಪೂರ್ಣಚಂದ್ರ, ಮುಖಂಡರಾದ ಕನಕಪ್ಪ ಸುಣಗಾರ, ಮಂಜೇಶ್, ಸುನಿಲ್‍ಶ್ರೇಷ್ಠಿ, ಪ್ರಾಚಾರ್ಯ ತಾರನಂದ್ಯಾಲ್, ಚಂದ್ರಶೇಖರ, ಬಸವರಾಜ, ಕಾಳಿ ಗಗನಾ, ಮಹಾಬಲೇಶ್ವರಪ್ಪ, ಶ್ರೀನಿವಾಸ, ಬಸವರಾಜ ಪಾಟೀಲ್, ವೀರೇಶ್, ಅಶೋಕ ರಡ್ಡೇರ್, ಬಿ. ಜಾಫರ್, ಎಚ್. ಕುಮಾರಸ್ವಾಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT