ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲಾಪುರ ಪಟ್ಟಣ ಪಂಚಾಯಿತಿ ಚುನಾವಣೆ: ಅಂತಿಮ ಕಣದಲ್ಲಿ 85 ಜನ

Last Updated 20 ಮೇ 2019, 13:32 IST
ಅಕ್ಷರ ಗಾತ್ರ

ಹೊಸಪೇಟೆ: ತಾಲ್ಲೂಕಿನ ಕಮಲಾಪುರ ಪಟ್ಟಣ ಪಂಚಾಯಿತಿ ಚುನಾವಣೆಯ ಅಂತಿಮ ಕಣದಲ್ಲಿ 85 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.

ಪಂಚಾಯಿತಿಯ ಒಟ್ಟು 20 ವಾರ್ಡುಗಳಿಗೆ ವಿವಿಧ ರಾಜಕೀಯ ಪಕ್ಷಗಳಿಂದ ಒಟ್ಟು 103 ಜನ ನಾಮಪತ್ರ ಸಲ್ಲಿಸಿದ್ದರು.ಸೋಮವಾರ ಮಧ್ಯಾಹ್ನ 3 ಗಂಟೆಯೊಳಗೆ ನಾಮಪತ್ರ ಹಿಂಪಡೆಯಲು ಅವಕಾಶ ಇತ್ತು. ಒಟ್ಟು 17 ಜನ ಪಕ್ಷೇತರರು ನಾಮಪತ್ರ ಹಿಂಪಡೆದಿದ್ದರಿಂದ ಅಂತಿಮ ಕಣ ಸ್ಪಷ್ಟವಾಗಿದೆ.

‘ಜೆ.ಡಿ.ಎಸ್‌. ಅಭ್ಯರ್ಥಿಯೊಬ್ಬರು ಪಕ್ಷ ಹಾಗೂ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಅವರನ್ನು ಪಕ್ಷದ ಅಭ್ಯರ್ಥಿ ಎಂದಷ್ಟೇ ಪರಿಗಣಿಸಲಾಗಿದೆ. ಹೀಗಾಗಿ ಅಂತಿಮ ಕಣದಲ್ಲಿ 85 ಅಭ್ಯರ್ಥಿಗಳು ಉಳಿದಂತಾಗಿದೆ’ ಎಂದು ಚುನಾವಣಾ ಅಧಿಕಾರಿ ‘ಪ್ರಜಾವಾಣಿ’ಗೆ ತಿಳಿಸಿದರು.

ಕಾಂಗ್ರೆಸ್‌ನಿಂದ 20, ಬಿಜೆಪಿಯ 18, ಜೆ.ಡಿ.ಎಸ್‌.ನಿಂದ 8, ಪಕ್ಷೇತರರಾಗಿ 39 ಮಂದಿ ಕಣದಲ್ಲಿದ್ದಾರೆ. ಮೇ 29ರಂದು ಮತದಾನ ನಡೆಯಲಿದೆ. 31ರಂದು ಮತ ಎಣಿಕೆ ಜರುಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT