ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ರಾಯರಾಳ ತಾಂಡಾ ಗ್ರಾಮದಲ್ಲಿ ಅಣಬೆ ತಿಂದು 9 ಜನ ಅಸ್ವಸ್ಥಗೊಂಡ ಘಟನೆ ಸೋಮವಾರ ನಡೆದಿದೆ.
ಅಸ್ವಸ್ಥಗೊಂಡವರನ್ನು ಮಗಿಮಾವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಣಬೆಯಲ್ಲಿ ವಿಷಕಾರಿ ಅಂಶ ಇದ್ದು, ತಿಂದ ಕೂಡಲೇ ವಾಂತಿ ಭೇದಿಯಾಗಿದೆ. ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸಿದ್ದರಿಂದ ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ವೈದ್ಯರು ತಿಳಿಸಿದರು.