ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ರಿಟಿಷರ ವಿರುದ್ಧ ಸಿಡಿದೆದ್ದ ನಾಯಕ

Published : 28 ಸೆಪ್ಟೆಂಬರ್ 2024, 16:11 IST
Last Updated : 28 ಸೆಪ್ಟೆಂಬರ್ 2024, 16:11 IST
ಫಾಲೋ ಮಾಡಿ
Comments

ಸಂಡೂರು: ಸ್ವಾತಂತ್ರ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಎದೆಗುಂದದೆ ಹೋರಾಡಿದ ಮಹಾನ್ ನಾಯಕ ಭಗತ್ ಸಿಂಗ್ ಎಂದು ಶ್ರೀಶೈಲೇಶ್ವರ ವಿದ್ಯಾಕೇಂದ್ರದ ಆಡಳಿತಾಧಿಕಾರಿ ಕುಮಾರ್ ಎಸ್.ನಾನಾವಟೆ ತಿಳಿಸಿದರು.

ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ
ಲಕ್ಷ್ಮಿ ಎಸ್.ನಾನಾವಟೆ ಶಿಕ್ಷಣ ಮಹಾವಿದ್ಯಾಲಯ ಮತ್ತು ಭಾರತೀಯ ಸುರಾಜ್ಯ ಸಂಸ್ಥೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸ್ವಾತಂತ್ರ ಹೋರಾಟಗಾರ ಭಗತ್‌ಸಿಂಗ್‌ ಅವರ 117ನೇ ಜನ್ಮದಿನಾಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ನಡೆಸಿ, ದೇಶಕ್ಕಾಗಿ ತನ್ನ ಪ್ರಾಣ ತ್ಯಾಗ ಮಾಡಿದ ಧೀರ ಭಗತ್‌ಸಿಂಗ್. ಜನಿಸಿದ ದಿನವೇ ಅವರ ತಂದೆ ಚಿಕ್ಕಪ್ಪಂದಿರು ಅಜಿತ್‌ಸಿಂಗ್, ಸ್ವರಣ್‌ಸಿಂಗ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಯಿತು. ತಮ್ಮ 12ನೇ ವಯಸ್ಸಿನಲ್ಲಿ ಜಲಿಯನ್ ವಾಲಾಭಾಗ್ ಹತ್ಯಾಕಾಂಡದ ಸ್ಥಳಕ್ಕೆ ಭೇಟಿ ನೀಡಿದಾಗ ಅವರಲ್ಲಿ ಮೊದಲ ಬಾರಿಗೆ ಕ್ರಾಂತಿಯ ಮನೋಭಾವನೆ ಹುಟ್ಟಿತು ಎಂದರು.

ಬಿ.ಇಡಿ ಕಾಲೇಜಿನ ಪ್ರಾಚಾರ್ಯ ದೇವರಾಜ್ ಯು. ಮಾತನಾಡಿದರು.

ಜನ್ಮ ದಿನಾಚರಣೆಯ ಪ್ರಯುಕ್ತ ಬಿಇಡಿ ಪ್ರಶಿಕ್ಷಣಾರ್ಥಿಗಳು ಗ್ರಾಮದಲ್ಲಿ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಂಡಿದ್ದರು. ಸ್ವಚ್ಛತೆ ನೈರ್ಮಲ್ಯ, ಆರೋಗ್ಯ, ಶಿಕ್ಷಣ, ಬಾಲ್ಯ ವಿವಾಹ ಮುಂತಾದ ವಿಷಯಗಳ ಬಗ್ಗೆ ಗ್ರಾಮಸ್ಥರಿಗೆ ಅರಿವನ್ನು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಮೇಗಳಗೇರಿ ಕೊಟ್ರೇಶಿ, ಅಶೋಕ, ಗುಡ್ಡಪ್ಪ, ಅಂಬುಜಾ ಎನ್.ಟಿ.ಸೌಜನ್ಯ ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT