ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಕ್ರಮ ಚಟುವಟಿಕೆ ತಾಣವಾದ ಸಾರ್ವಜನಿಕ ಆಸ್ಪತ್ರೆ

Published 29 ಫೆಬ್ರುವರಿ 2024, 13:38 IST
Last Updated 29 ಫೆಬ್ರುವರಿ 2024, 13:38 IST
ಅಕ್ಷರ ಗಾತ್ರ

ಸಿರುಗುಪ್ಪ: ನಿತ್ಯ ಸಾವಿರಾರು ರೋಗಿಗಳು ಚಿಕಿತ್ಸೆಗೆ ಬರುವ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮೂರನೇ ಮಹಡಿಯು ಜೂಜಾಟ, ಇಸ್ಪೀಟ್, ಮದ್ಯಪಾನದಂತಹ ಚಟುವಟಿಕೆಗಳ ತಾಣವಾಗಿದೆ.

ಆಸ್ಪತ್ರೆಯ ಮೂರನೇ ಮಹಡಿಯ ಕಟ್ಟಡ ಕಾಮಗಾರಿ ನಡೆಯುತ್ತಿದೆ. ಕಟ್ಟಡ ಕಾರ್ಮಿಕರು ಕೆಲಸದ ಸಮಯದಲ್ಲಿ ಮದ್ಯಪಾನ ಮಾಡಿ ಗಲೀಜು ಮಾಡುತ್ತಿದ್ದು, ಇಲ್ಲಿನ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ರೋಗಿಗಳ ಆರೋಪ.

ಕಟ್ಟಡ ಕಾರ್ಮಿಕರೊಂದಿಗೆ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಕೆಲವು ಸಿಬ್ಬಂದಿಯೂ ಇಸ್ಪೀಟ್ ಜೂಜಾಟದಲ್ಲಿ ತೊಡಗಿರುವ ಕುರಿತು ಸಾರ್ವಜನಿಕರು ಆಡಳಿತ ವೈದ್ಯಾಧಿಕಾರಿಗಳ ಗಮನಕ್ಕೆ ತಂದರೂ ಕ್ರಮಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ.

‘ಮೂರನೇ ಮಹಡಿಯನ್ನು ಗುತ್ತಿಗೆದಾರರು ನಮಗೆ ಹಸ್ತಾಂತರ ಮಾಡಿಲ್ಲ. ಇದರಿಂದಾಗಿ ಅಲ್ಲಿ ನಮ್ಮ ಸಿಬ್ಬಂದಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ ಬಗ್ಗೆ ಮಾಹಿತಿ ನಮಗಿಲ್ಲ. ಈ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವುದು’ ಎಂದು ಆಸ್ಪತ್ರೆ ಮುಖ್ಯ ಆಡಳಿತ ವೈದ್ಯಾಧಿಕಾರಿ ಗುರುನಾಥ ತಿಳಿಸಿದ್ದಾರೆ.

ಸಿರುಗುಪ್ಪ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮೂರನೇ ಮಹಡಿ ಜೂಜಾಟ ಇಸ್ಪೀಟ್ ಮದ್ಯಪಾನದಂತಹ ಚಟುವಟಿಕೆಗಳ ತಾಣವಾಗಿದೆ
ಸಿರುಗುಪ್ಪ ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಮೂರನೇ ಮಹಡಿ ಜೂಜಾಟ ಇಸ್ಪೀಟ್ ಮದ್ಯಪಾನದಂತಹ ಚಟುವಟಿಕೆಗಳ ತಾಣವಾಗಿದೆ

ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಜೂಜಾಟ ನಡೆಯುತ್ತಿರುವ ಕುರಿತು ತನಿಖೆ ನಡೆಸಿ ಭಾಗಿಯಾದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು

ಡಾ.ಈರಣ್ಣ ಟಿ.ಎಚ್.ಒ. ಸಿರುಗುಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT