ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೈಕ್‍- ಬಸ್ ಡಿಕ್ಕಿ: ಯುವಕ ಸಾವು

Published : 26 ಸೆಪ್ಟೆಂಬರ್ 2024, 15:43 IST
Last Updated : 26 ಸೆಪ್ಟೆಂಬರ್ 2024, 15:43 IST
ಫಾಲೋ ಮಾಡಿ
Comments

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನ ವಲ್ಲಭಾಪುರ-ಬಿ.ಮುತ್ಕೂರು ರಸ್ತೆಯಲ್ಲಿ ಪಟ್ಟಣದ ಶ್ರೀರೇಣುಕ ವಿದ್ಯಾಸಂಸ್ಥೆಯ ಬಸ್ ಬೈಕ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತಂಬ್ರಹಳ್ಳಿ ದುರುಗಪ್ಪ(26) ಮೃತರು. ಹಿಂಬದಿ ಸವಾರ ತೀವ್ರವಾಗಿ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಲೆಯ ವಿದ್ಯಾರ್ಥಿಗಳನ್ನು ಬಿ.ಮುತ್ಕೂರು ಗ್ರಾಮದಿಂದ ವಲ್ಲಭಾಪುರಕ್ಕೆ ಬಿಡುವುದಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಕಳೆದ ವರ್ಷ ಇದೇ ವಿದ್ಯಾಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಲ್ಲೂಕಿನ ಹಗರಿಕ್ಯಾದಿಗಿಹಳ್ಳಿ ಗ್ರಾಮದ ಬಳಿ ಯುವಕನೊಬ್ಬ ಮೃತಪಟ್ಟಿದ್ದ. ಬಸ್ ಚಾಲಕನ ಅಜಾಗರುಕತೆಯ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT