ಹೊಸಪೇಟೆ (ವಿಜಯನಗರ): ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದಿಂದ ಪ್ರತ್ಯೇಕವಾಗಿ ಅಗ್ನಿ ಬನ್ನಿರಾಯ ಸ್ವಾಮಿ ಜಯಂತಿ ಮಂಗಳವಾರ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ತಿರುಳ ಸಮುದಾಯದ ಸಾಂಸ್ಕೃತಿಕ ವೀರ ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಅನುರಾಧ ಜಿ. ಅವರು ಪೂಜೆ ಸಲ್ಲಿಸಿ ಪುಷ್ಪ ಗೌರವ ಸಲ್ಲಿಸಿದರು. ತಹಶೀಲ್ದಾರ್ ಕಾರ್ತಿಕ್, ಪ್ರತಿಭಾ ಇತರರಿದ್ದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಅವರು ಅಗ್ನಿಬನ್ನಿರಾಯ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಂದಾಯ ಇಲಾಖೆಯ ಜಿ.ಮಲ್ಲಿಕಾರ್ಜುನ ಗೌಡ ಸೇರಿದಂತೆ ಇತರರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.