ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಬ್ರಿಜ್‌ ಭೂಷಣ್‌ ವಿರುದ್ಧ ಕ್ರಮಕ್ಕೆ ಎಐಡಿವೈಒ ಆಗ್ರಹ

Published 25 ಮೇ 2023, 4:26 IST
Last Updated 25 ಮೇ 2023, 4:26 IST
ಅಕ್ಷರ ಗಾತ್ರ

ಹೊಸಪೇಟೆ(ವಿಜಯನಗರ): ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಕೇಂದ್ರ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬುಧವಾರ ನಗರದ ತಹಶೀಲ್ದಾರ್ ಕಚೇರಿ ಎದುರು ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂಘಟನೆ ಮುಖಂಡ ಜಗದೀಶ್ ನೇಮಕಲ್ ಮಾತನಾಡಿ, ‘ಬಿಜೆಪಿ ಸಂಸದ ಮತ್ತು ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ (ಡಬ್ಲ್ಯುಎಫ್‍ಐ) ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಮಹಿಳಾ ಕುಸ್ತಿಪಟುಗಳು ಒಂದು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ, ನಾಯಕರು ಮೌನವಹಿಸಿರುವುದು ದುರದುಷ್ಟಕರ. ಸಮಸ್ಯೆ ಆಲಿಸದೆ ಇರುವುದು ಆಡಳಿತ ವ್ಯವಸ್ಥೆಯ ಜನವಿರೋಧಿಯಾಗಿದೆ‘ ಎಂದು ಆರೋಪಿಸಿದರು.

‘‘ಭೇಟಿ ಬಜಾವೋ, ಭೇಟಿ ಪಡಾವೋ’ ಘೋಷಣೆ ಹಾಕುವವರು ಈ ಬಗ್ಗೆ ಚಕಾರ ಎತ್ತುತ್ತಿಲ್ಲ. ಇದರ ಹಿಂದೆ ಅನುಮಾನಗಳು ಮೂಡುತ್ತಿದ್ದು, ಪ್ರಧಾನ ಮಂತ್ರಿಗಳು ತಕ್ಷಣವೇ ಸಂಸದನನ್ನು ವಿಚಾರಣೆಗೆ ಒಳಪಡಿಸಿ, ಶಿಕ್ಷೆ ವಿಧಿಸಬೇಕು‘ ಎಂದರು.

ಜಿಲ್ಲಾ ಸಮಿತಿಯ ಪಾಲಾಕ್ಷ ಹಡಗಲಿ ಮಾತನಾಡಿ, 'ಪುರಾಣದಲ್ಲಿ ಹೆಣ್ಣು ಮಕ್ಕಳಿಗೆ ಎಷ್ಟು ಗೌರವ ಇತ್ತು ಎನ್ನುವುದು ನಂಬಿಕೆ. ಆದರೆ, ಪ್ರಸ್ತುತ ಹೆಣ್ಣುಮಕ್ಕಳೊಂದಿಗೆ ಹೇಗೆ ನಡೆಸಿಕೊಳ್ಳುತ್ತಿದ್ದೇವೆ ಎಂಬುದು ವರ್ತಮಾನವಾಗಿದೆ. ಎಲ್ಲ ಕಡೆಯಲ್ಲಿ ಹೆಣ್ಣಿನ ಮೇಲೆ ಅತ್ಯಾಚಾರ, ಲೈಂಗಿಕ ಕಿರುಕುಳ, ಕೊಲೆಯತ್ನ ನಡೆಯುತ್ತಿರುವುದು ಸಮಾಜದಲ್ಲಿ ಒಳ್ಳೆಯ ಬೆಳವಣಿಗೆಯಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಐಡಿವೈಒ ಜಿಲ್ಲಾ ಸಮಿತಿ ಸದಸ್ಯರಾದ ಗೋಪಾಲಕೃಷ್ಟ, ಅಜ್ಜಯ್ಯ ಸಂಡೂರು ಮಾತನಾಡಿದರು. ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಮಂಜುಳಾ ಡೊಳ್ಳಿ, ಬಣಕಾರ ನಿವೇದಿತಾ, ಕಲ್ಮೇಶ್, ವಿನೋದ್, ಉಮೇಶ್ ನಾಯಕ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT