ಬಳ್ಳಾರಿ: ರಾಜ್ಯದಲ್ಲಿ ಕನಿಷ್ಠ ವೇತನವನ್ನು ತಕ್ಷಣ ಪರಿಷ್ಕರಿಸಿ ಆದೇಶ ಹೊರಡಿಸಬೇಕು. ಗುತ್ತಿಗೆ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸಬೇಕು ಎಂದು ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಸರ್ಕಾರವನ್ನು ಗುರುವಾರ ಆಗ್ರಹಿಸಿದರು.

ವಿವಿಧ ಸಂಘಟನೆಗಳು ಜಂಟಿಯಾಗಿ ಎಐಯುಟಿಯುಸಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದವು.

ಎಐಯುಟಿಯುಸಿ ಜಿಲ್ಲಾ ಘಟಕದ ಅಧ್ಯಕ್ಷ ದೇವದಾಸ್ ಮಾತನಾಡಿ, ‘ಕನಿಷ್ಠ ವೇತನವು ಕಾರ್ಮಿಕರ ಶ್ರಮಕ್ಕೆ ತಕ್ಕ ಪ್ರತಿಫಲ. ಅವರ ಕುಟುಂಬದ ನಿರ್ವಹಣೆಗೆ ಅತ್ಯಗತ್ಯ. ಪ್ರತಿ ಐದು ವರ್ಷಕ್ಕೊಮ್ಮೆ ವೇತನ ಪರಿಷ್ಕರಿಸಬೇಕೆಂಬ ನಿಯಮವಿದ್ದರೂ, ರಾಜ್ಯ ಸರ್ಕಾರ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಸಂಘಟನೆ ಮುಖಂಡರು ಆರೋಪಿಸಿದರು.

‘ಕನಿಷ್ಠ ವೇತನ ಸಲಹಾ ಮಂಡಳಿಯು ಕೌಶಲ ರಹಿತ ಕಾರ್ಮಿಕರಿಗೆ ಕನಿಷ್ಠ ₹21 ಸಾವಿರದಿಂದ ₹35 ಸಾವಿರವರೆಗೆ ವೇತನ ನಿಗದಿಪಡಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಇದರಿಂದ ಲಕ್ಷಾಂತರ ಕಾರ್ಮಿಕರಲ್ಲಿ ನಿರೀಕ್ಷೆ ಮೂಡಿದೆಯಾದರೂ, ಅಧಿಸೂಚನೆ ಹೊರಬಂದಿಲ್ಲ. ಇದು ನಿರಾಶೆ ಮೂಡಿಸಿದೆ’ ಎಂದರು.

ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಪ್ರಮೋದ್ ಮಾತನಾಡಿ, ‘ಕಾರ್ಮಿಕರಿಗಾಗಿ ವಿವಿಧೋದ್ದೇಶ ಸಹಕಾರ ಸಂಘಗಳನ್ನು ರಚಿಸುವ ನಿರ್ಧಾರ ಮಾಡಲಾಗಿದೆಯಾದರೂ, ಇನ್ನೂ ಆರಂಭವಾಗಿಲ್ಲ. ಹಲವು ಜಿಲ್ಲೆಗಳಲ್ಲಿ ಕಾರ್ಮಿಕರು ಸದಸ್ಯತ್ವ ಶುಲ್ಕ ಪಾವತಿಸಿ ನೋಂದಾಯಿಸಿಕೊಂಡಿದ್ದರೂ ಸಹಕಾರ ಸಂಘಗಳು ಕಾರ್ಯಾರಂಭ ಮಾಡದಿರುವುದು ಗುತ್ತಿಗೆ ನೌಕರರಲ್ಲಿ ಅಸಮಾಧಾನ ಮೂಡಿಸಿದೆ’ ಎಂದು ಹೇಳಿದರು.

ಕನಿಷ್ಠ ವೇತನವನ್ನು ತಕ್ಷಣ ಜಾರಿಗೆ ತರಬೇಕು, ಹೊರಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸಬೇಕು, ಎಲ್ಲಾ ಜಿಲ್ಲೆಗಳಲ್ಲಿ ಕಾರ್ಮಿಕರ ಸಹಕಾರ ಸಂಘಗಳನ್ನು ತಕ್ಷಣ ರಚಿಸಬೇಕು ಎಂದು ಸಂಘಟನೆಗಳು ಒತ್ತಾಯಿಸಿದವು.

ಹೋರಾಟಗಾರರಾದ ಎ.ಶಾಂತಾ, ಸುರೇಶ, ಕಿರಣ್, ಚೇತನ್, ಕೃಷ್ಣ,ಹುಲುಗಪ್ಪ,
ರೋಹಿಣಿ, ಚಂದ್ರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.