ಬಳ್ಳಾರಿ: ‘ನೇರ, ನಿಷ್ಠುರ, ತೀಕ್ಷ್ಣ ಬರಹಗಳ ಮೂಲಕ ವರ್ಣವ್ಯವಸ್ಥೆ, ಲಿಂಗ ತಾರತಮ್ಯ, ಅಸ್ಪೃಶ್ಯತೆ ಮುಂತಾದ ಸಾಮಾಜಿಕ ಅನಿಷ್ಟಗಳ ಬಗ್ಗೆ ನಿರಂತರ ಜಾಗೃತಿ ಮೂಡಿಸಿದವರು ನಿಜಶರಣ ಅಂಬಿಗರ ಚೌಡಯ್ಯ’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

‘ಅಂಬಿಗ ಎಂದರೆ ಭರವಸೆಯ ಬೆಳಕು ಎಂದು ಸಾರಿದ ಮಹಾನ್ ವಚನಕಾರ ಅಂಬಿಗರ ಚೌಡಯ್ಯ. 12 ನೇ ಶತಮಾನದ ಶಿವಶರಣರ ಸಾಲಿನಲ್ಲಿ ಇವರೂ ಪ್ರಮುಖರು. ಸಾಮಾಜಿಕ ಪರಿವರ್ತನೆಗಾಗಿ ಬಸವಣ್ಣನವರ ಹೆಗಲಿಗೆ ಹೆಗಲಾಗಿ ನಿಂತವರಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರು ಪ್ರಧಾನರು. ನಿರ್ಮಲ ಭಕ್ತಿ, ನಿಸ್ವಾರ್ಥ ಸೇವೆಯೇ ಭಗವಂತನನ್ನು ಒಲಿಸಿಕೊಳ್ಳುವ ಮಾರ್ಗಗಳು’ ಎಂದು ಬಿಂಬಿಸಿದವರು ಚೌಡಯ್ಯನವರು’ ಎಂದರು.

ಸಂಗನಕಲ್ಲಿನ ನಿವೃತ್ತ ಶಿಕ್ಷಕ ಕೆ.ಬಿ. ಸಿದ್ದಲಿಂಗಪ್ಪ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮಕ್ಕೂ ಮೊದಲು ನಿಜಶರಣ ಅಂಬಿಗರ ಚೌಡಯ್ಯ ಭಾವಚಿತ್ರದ ಮೆರವಣಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ಬಳ್ಳಾರಿ ಜಿಲ್ಲಾ ಗಂಗಾಮತಸ್ಥರ ಸಂಘದ ಅಧ್ಯಕ್ಷ ಬಿ.ಮೌಲಾಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.