ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಳ್ಳಾರಿ | ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

Published 27 ಫೆಬ್ರುವರಿ 2024, 15:41 IST
Last Updated 27 ಫೆಬ್ರುವರಿ 2024, 15:41 IST
ಅಕ್ಷರ ಗಾತ್ರ

ಬಳ್ಳಾರಿ: ತೋಟಗಾರಿಕೆ ಇಲಾಖೆಯಿಂದ 2024-25ನೇ ಸಾಲಿಗೆ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮೇ 2ರಿಂದ 2025ರ ಫೆ.28ರವರೆಗೆ ಒಟ್ಟು 24 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ.

ಅಭ್ಯರ್ಥಿಗಳು ಕನಿಷ್ಠ ಕನ್ನಡ ವಿಷಯಗಳೊಂದಿಗೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು. ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಬಳ್ಳಾರಿ, ಕಚೇರಿಯಲ್ಲಿ ಪಡೆಯಬಹುದು ಅಥವಾ ಇಲಾಖಾ ವೆಬ್ ಸೈಟ್ https://horticulturedir. karnataka.gov.in ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದು. 

ಅರ್ಜಿ ಸಲ್ಲಿಸಲು ಏ.1 ಕೊನೆ ದಿನ. ಏ.6ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ದೂ.08392-278588ಗೆ ಸಂಪರ್ಕಿಸಬಹುದು.

ಅಂತಾರಾಷ್ಟ್ರೀಯ ಸಮ್ಮೇಳನ

ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ವತಿಯಿಂದ ‘ಸಮಾಜ ವಿಜ್ಞಾನದಲ್ಲಿ ಬಹುಶಿಸ್ತೀಯ ಪ್ರಚಲಿತ ಸಂಶೋಧನೆಗಳು’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಫೆ.28 ಮತ್ತು 29ರಂದು ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಫೆ.28ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬಳ್ಳಾರಿ: ಉತ್ತರಾಖಂಡ ರಾಜ್ಯದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ 2025ನೇ ಸಾಲಿನ 8ನೇ ತರಗತಿಗಾಗಿ ಪ್ರವೇಶ ಬಯಸುವ ರಾಜ್ಯದ  ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ 2024ರ ಜೂನ್ 1ರಂದು ನಡೆಯಲಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರಬೇಕು ಅಥವಾ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಗಳು 13 ವರ್ಷದೊಳಗಿರಬೇಕು. ಈ ಸಂಸ್ಥೆಯ ಮುಖ್ಯ ಗುರಿ ಯುವಕರನ್ನು ದೇಶದ ಸಶಸ್ತ್ರ ಪಡೆಗೆ ಸೇರಲು ಸಿದ್ಧಗೊಳಿಸುವುದು ಹಾಗೂ ಸರ್ವ ರೀತಿಯ ವಿದ್ಯಾಭ್ಯಾಸ, ತರಬೇತಿ ನೀಡುವುದಾಗಿದೆ.

ಹೆಚ್ಚಿನ ಮಾಹಿತಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಜಂಟಿ ನಿರ್ದೇಶಕರು ಅಥವಾ ದೂ.0836-2440176 ಸಂಪರ್ಕಿಸಬಹುದು ಎಂದು ಧಾರವಾಡದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT